ಕರಾವಳಿ
ಮಣಿಪಾಲ : ಬೈಕ್ ಡಿವೈಡರ್ ಗೆ ಡಿಕ್ಕಿ ಕಾಲೇಜಿನ ವಿದ್ಯಾರ್ಥಿ ಮೃತ್ಯು

ಮಣಿಪಾಲ: ನಿನ್ನೆ ಸಂಜೆ ನಡೆದ ಅಪಘಾತದಲ್ಲಿ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿಯೋರ್ವ
ಮೃತಪಟ್ಟಿದ್ದು, ಇನ್ನೊರ್ವ ಸವಾರ ಚಿಂತಾಜನಕ ಸ್ಥಿತಿಯಲ್ಲಿರುವ ಬಗ್ಗೆ ಘಟನೆ ನಡೆದಿದೆ.
ಮಣಿಪಾಲದಿಂದ ಉಡುಪಿ ಕಡೆ ಬರುತ್ತಿದ್ದಾಗ ಲಕ್ಷ್ಮೀಂದ್ರ
ನಗರದ ಬಳಿ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ
ಹೊಡೆದ ರಭಸಕ್ಕೆ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿ
ಕೋಟೇಶ್ವರ ನಿವಾಸಿ ಶೋದನ್ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಆಡ್ರಿನ್ ವಾಸ್ ಚಿಂತಾಜನಕ ಸ್ಥಿತಿಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.