ರಾಷ್ಟ್ರೀಯ
ಇಂದಿನ ಕೋರೊನಾ ಪ್ರಕರಣ ವಿವರ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣದಲ್ಲಿ ಸ್ವಲ್ಪ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 6809 ಮಂದಿಗೆ ಕೊರೋನಾ ಸೋಂಕು ತಗುಲಿದೆ.
ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 8414 ಮಂದಿ
ಗುಣಮುಖರಾಗಿದ್ದಾರೆ. ದೇಶದಲ್ಲಿ ಸಕ್ರಿಯ ಕೊರೋನಾ
ಪ್ರಕರಣಗಳ ಸಂಖ್ಯೆ 55.114ಕ್ಕೆ ತಲುಪಿದೆ.
ಕೊರೋನಾ ಪಾಸಿಟಿವಿಟಿ ದರ ಶೇಕಡ 2.12 ಆಗಿದೆ.
ಗಣೇಶೋತ್ಸವ ಸೇರಿದಂತೆ ಸಾರ್ವಜನಿಕ ಹಬ್ಬಗಳ ಹಿನ್ನೆಲೆಯಲ್ಲಿ ಗರಿಷ್ಟ ಮುನ್ನೆಚ್ಚರಿಕೆ ವಹಿಸುವಂತೆ ಕೇಂದ್ರ ಆರೋಗ್ಯ ಇಲಾಖೆ ರಾಜ್ಯಗಳಿಗೆ ಸೂಚನೆ ನೀಡಿದೆ