ಕರಾವಳಿ
ಕುವೈತ್‌ನಲ್ಲಿ ನಡೆದ ಕಾರು ಅಪಘಾತದಲ್ಲಿ ಮಂಗಳೂರು ಮೂಲದ ಯುವಕ ಮೃತ್ಯು

ಮಂಗಳೂರು: ಕುವೈತ್‌ನಲ್ಲಿ ನಡೆದ ಕಾರು ಅಪಘಾತದಲ್ಲಿ ಮಂಗಳೂರು ಮೂಲದ ಬಜಾಲ್ ಪಕ್ಕಲಡ್ಕದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿ ಮಂಗಳೂರಿನ ಸಫಿಯಾ ಅವರ ಪುತ್ರ ಆಸೀಫ್ ಪಕ್ಕಲಡ್ಕ (33) ಎಂದು ತಿಳಿದು ಬಂದಿದೆ.
ಕುವೈತ್‌ನ ಕಂಪೆನಿಯೊಂದರಲ್ಲಿ ಸೇಲ್ಸ್‌ಮನ್ ಆಗಿದ್ದ ಅವರು ಶುಕ್ರವಾರ ಸಂಜೆ ಕೆಲಸ ಮುಗಿಸಿ ಮನೆಗೆ ಬೈಕ್‌ನಲ್ಲಿ ಮರಳುವ ವೇಳೆ ಕಾರು ಢಿಕ್ಕಿಯಾಗಿ ಸಾವನ್ನಪ್ಪಿದ್ದಾರೆ ಮಾಹಿತಿ ತಿಳಿದು ಬಂದಿದೆ.