ಮಲ್ಪೆ : ಸಮುದ್ರದ ನೀರಿನಲ್ಲಿ ಮುಳುಗಿದ ಮಣಿಪಾಲದ ವಿದ್ಯಾರ್ಥಿಗಳು : ಇಬ್ಬರು ನೀರು ಪಾಲು
ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆಯ ಹೂಡೆ ಸಮೀಪದ ಬೀಚ್ ನಲ್ಲಿ ನೀರಿಗೆ ಇಳಿದಿದ್ದ ಮಣಿಪಾಲದ ಎಂಐಟಿ ವಿದ್ಯಾರ್ಥಿಗಳಲ್ಲಿ ಓರ್ವ ಸಮುದ್ರ ಪಾಲಾಗಿದ್ದಾನೆ. ಇಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಸುಮಾರು 15 ಮಂದಿ ಮಣಿಪಾಲದ ಎಂಐಟಿಯ ಇಂಜಿನಿಯರಿಂಗ್ ವಿದ್ಯಾರ್ಥಿಗಳಿದ್ದ ತಂಡವು ಇಂದು ಹೂಡೆಯ ಸಮುದ್ರ ತೀರದಲ್ಲಿ ಈಜಾಡಲೆಂದು ಸಮುದ್ರಕ್ಕೆ ಇಳಿದಿದ್ದ ಸಂದರ್ಭದಲ್ಲಿ ಅಲೆಯ ರಭಸಕ್ಕೆ ಮೂವರು ಕೊಚ್ಚಿ ಹೋಗಿದ್ದರು ಎನ್ನಲಾಗಿದೆ
ಈ ಮಾಹಿತಿ ತಿಳಿದ ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರಿನ ನಿಶಾಂತ್ ಹಾಗೂ ಷಣ್ಮುಗ ಅವರನ್ನು ರಕ್ಷಿಸಿದ್ದು, ಮಣಿಪಾಲ ಆಸ್ಪತ್ರೆದಾಖಲಿಸಲಾಗಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ
ಸಮುದ್ರ ಪಾಲಾದ ವಿದ್ಯಾರ್ಥಿ ಹೈದಾರಬಾದಿನ ಶ್ರೀಕರ ಇನ್ನೂ ಪತ್ತೆಯಾಗಿಲ್ಲ ಹುಡುಕಾಟ ಮುಂದುವರಿದೆ.ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.ಓರ್ವ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.