ಹಾಸನದಲ್ಲಿ ಭೀಕರ ರಸ್ತೆ ಅಪಘಾತ

ಹಾಸನ: ಕೆಎಸ್‌ಆರ್‌ಟಿಸಿ ಬಸ್, ಟಿಟಿ ವಾಹನಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಟೆಂಪೋ ಟ್ರಾವೆಲರ್ ನಲ್ಲಿದ್ದ 4 ಮಕ್ಕಳು ಸೇರಿದಂತೆ ಒಟ್ಟು 9 ಜನರು ಸಾವನ್ನಪ್ಪಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಬಾಣವಾರ ಹೋಬಳಿ ಗಾಂಧಿ ನಗರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಮೃತರನ್ನು ಲೀಲಾವತಿ (50), ಚೈತ್ರಾ (33),ಸಮರ್ಥ (10), ಡಿಂಪಿ (12), ತನ್ಮಯ್ (10),ಧ್ರುವ (2), ವಂದನಾ (20), ದೊಡ್ಡಯ್ಯ (60),ಭಾರತಿ (50) ಎಂದು ಗುರುತಿಸಲಾಗಿದೆ.
ಸರ್ಕಾರಿ ಬಸ್ ಮತ್ತು ಟ್ಯಾಂಕರ್ ನಡುವೆಸಿಲುಕಿದ ಟೆಂಪೋ ನಜ್ಜು ಗುಜ್ಜಾಗಿದ್ದು, ಸ್ಥಳದಲ್ಲಿಯೇ ಐವರು ಮೃತಪಟ್ಟಿದ್ದಾರೆ. ಉಳಿದವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಟೆಂಪೋ ಟ್ರಾವೆಲರ್ ನಲ್ಲಿದ್ದವರು ಧರ್ಮಸ್ಥಳಕ್ಕೆ
ಹೋಗಿ ಬಾಣವಾರ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ
ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಮೃತದೇಹವನ್ನು ಗ್ರಾಮದ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಗಾಯಾಳುಗಳನ್ನು ಹಾಸನದಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾಸ್ಥಳಕ್ಕೆ ಬಾಣಾವರ ಪೊಲೀಸರು ಭೇಟಿ ನೀಡಿಪ್ರಕರಣ ದಾಖಲಿಸಿಕೊಂಡಿದ್ದಾರೆ.