ರಾಷ್ಟ್ರೀಯ

ಹಳದಿ ಎಲೆ ರೋಗ ಪರಿಹರಿಸುವ ನಿಟ್ಟಿನಲ್ಲಿ ತಜ್ಞರ ಸಮಿತಿ ಶ್ರಮಿಸಲಿದೆ: ಶೋಭಾ ಕರಂದ್ಲಾಜೆ

ನವದೆಹಲಿ: ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಅಡಿಕೆ
ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗದ
ಸಮಸ್ಯೆಯನ್ನು ವಿಶ್ಲೇಷಿಸಲು ಮತ್ತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಅಧ್ಯಯನವನ್ನು ಕೈಗೊಳ್ಳಲು ತಜ್ಞರ ಸಮಿತಿಯನ್ನು ರಚಿಸಿ ಇಂದು ಕೇಂದ್ರ ಕೃಷಿ ಸಚಿವಾಲಯ ಆದೇಶವನ್ನು ಹೊರಡಿಸಿದೆ.

ಆಗಸ್ಟ್ ತಿಂಗಳಲ್ಲಿ ಕೇಂದ್ರ ಕೃಷಿ ಕಾರ್ಯದರ್ಶಿಗಳು ಹಾಗೂ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಿದ ಸಭೆಯ ನಿರ್ಣಯದಂತೆ ಹಾಗೂ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರ ನಿರ್ದೇಶನದಂತೆ ಇಂದು ತಜ್ಞರ ಸಮಿತಿಯನ್ನು ಸ್ಥಾಪಿಸಲಾಗಿದೆ.

ಈ ತಜ್ಞರ ಸಮಿತಿಯು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಮತ್ತು ಇತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!