ರಾಜ್ಯ

ಅಮರ ಜವಾನ್‌ ಜ್ಯೋತಿ ವಿಲೀನ – ಹುತಾತ್ಮರಿಗೆ ಮಾಡಿದ ಅಗೌರವ: ಬಿಕೆ ಹರಿಪ್ರಸಾದ್‌

ಬೆಂಗಳೂರು ಜನವರಿ 22, 2022 : 1971 ರ ಯುದ್ದದಲ್ಲಿ ಹುತಾತ್ಮರಾದ ಯೋಧರ ನೆನೆಪಿಗೆ ಇಂಡಿಯಾ ಗೇಟ್‌ನಲ್ಲಿ ಹಚ್ಚಲಾದ ಅಮರ ಜವಾನ್‌ ಜ್ಯೋತಿಯನ್ನು ವಿಲೀನಗೊಳಿಸಿರುವುದು ಹುತಾತ್ಮರಿಗೆ ಮಾಡಿದ ಅಗೌರವ ಎಂದು *ಮಾಜಿ ಸಂಸದರು ಹಾಗೂ ಹಾಲಿ ವಿಧಾನಪರಿಷತ್‌ ಸದಸ್ಯರಾದ ಬಿ ಕೆ ಹರಿಪ್ರಸಾದ್‌ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, ಕಳೆದ 50 ವರ್ಷಗಳಿಂದ ಈ ಜ್ಯೋತಿ ನಮ್ಮ ದೇಶಕ್ಕಾಗಿ ಹುತಾತ್ಮರಾದ ಯೋಧರ ಸ್ಮರಣೆಯ ಪ್ರತೀಕವಾಗಿತ್ತು. ಅಮರ ಜವಾನ್‌ ಜ್ಯೋತಿಯ ಶಾಶ್ವತ ಜ್ಯೋತಿ ನಮ್ಮ ದೇಶಭಕ್ತಿಯ ಹಾಗೂ ದೇಶಪ್ರೇಮದ ಸಂಕೇತವಾಗಿ ಪ್ರಜ್ವಲಿಸುತ್ತಿತ್ತು. ಎರಡೂ ಜ್ಯೋತಿಗಳ ನಿರ್ವಹಣೆ ಕಷ್ಟ ಎನ್ನುವ ಹಿನ್ನಲೆಯಲ್ಲಿ ಯುದ್ದ ಸ್ಮಾರಕದಲ್ಲಿ ನಿರ್ಮಿಸಲಾಗಿರುವ ಜ್ಯೋತಿಯಲ್ಲಿ ವಿಲೀನಗೊಳಿಸಿರುವುದು ಸರಿಯಲ್ಲ.

1971 ರಲ್ಲಿ ಇಂದಿರಾ ಗಾಂಧಿಯವರ ನೇತೃತ್ವದ ಕಾಂಗ್ರೆಸ್‌ ಸರಕಾರ ಅಧಿಕಾರದಲ್ಲಿದ್ದಾಗ ಅಮರ ಜವಾನ್‌ ಜ್ಯೋತಿಯನ್ನು ಇಂಡಿಯಾ ಗೇಟ್‌ ನಲ್ಲಿ ಇರಿಸಲಾಗಿತ್ತು. ಆನಂತರ ಹಲವಾರು ಯುದ್ದಗಳಲ್ಲಿ ತಮ್ಮ ಪ್ರಾಣವನ್ನು ದೇಶಕ್ಕಾಗಿ ನೀಡಿದ ಹಲವಾರು ಧೀರ ಯೋಧರ ನೆನಪೂ ಕೂಡಾ ಇದರಲ್ಲೇ ಸಮ್ಮಿಳತವಾಗಿತ್ತು. ಈಗ ಮೋದಿ ನೇತೃತ್ವದ ಸರಕಾರ ಇದನ್ನು ಯುದ್ದ ಸ್ಮಾರಕದಲ್ಲಿ ವಿಲೀನಗೊಳಿಸುವ ನಿರ್ಧಾರ ಕೈಗೊಳ್ಳುವ ಮೂಲಕ ಹುತಾತ್ಮರಿಗೆ ಅವಮಾನ ಮಾಡಿದೆ. ಇಂತಹ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ನಮ್ಮ ಇತಿಹಾಸವನ್ನು ತಿರುಚುವಂತಹ ಕಾರ್ಯಕ್ಕೆ ಕೇಂದ್ರ ಸರಕಾರ ಕೈ ಹಾಕಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!