
ಬೆಂಗಳೂರು: ಕರ್ನಾಟಕ ಶಿಕ್ಷಣ ಕ್ಯಾಬಿನೆಟ್ ಒಂದರಿಂದ 7ನೇ ತರಗತಿಯವರೆಗಿನ ಆನ್ ಲೈನ್ ಶಿಕ್ಷಣವನ್ನು ರದ್ದುಗೊಳಿಸುವ ಮೂಲಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಇಂದು ಕ್ಯಾಬಿನೆಟ್ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಕಾನೂನು ಮತ್ತು ಸಂಸದೀಯ ಸಚಿವ ಮಾಧುಸ್ವಾಮಿ, ಸಂಪುಟದಲ್ಲಿ ಆನ್ ಲೈನ್ ತರಗತಿಯ ಬಗ್ಗೆ ಚರ್ಚೆ ನಡೆಯಿತು. 7ನೇ ತರಗತಿಯವರೆಗಿನ ಆನ್ಲೈನ್ ಶಿಕ್ಷಣವನ್ನು ರದ್ದು ಮಾಡುವಂತೆ ಸಚಿವರು ಒತ್ತಾಯಿಸಿದರು. ಹೀಗಾಗಿ ಎಲ್ಲ ಮಾದರಿಯ ಪಠ್ಯ ಬೋಧಿಸುತ್ತಿರುವ ಶಾಲೆಗಳಲ್ಲಿ ನಡೆಯುತ್ತಿರುವ 7ನೇ ತರಗತಿವರೆಗೆ ಆನ್ಲೈನ್ ಶಿಕ್ಷಣವನ್ನು ರದ್ದು ಮಾಡಲಾಗಿದೆ ಎಂದು ತಿಳಿಸಿದರು.ಸಾಕಷ್ಟು ವಿದ್ಯಾರ್ಥಿಗಳು ಗ್ರಾಮೀಣ ಭಾಗದಲ್ಲಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಅನಾನುಕೂಲವಾಗುವ ಕಾರಣಕ್ಕೆ 6 ಮತ್ತು 7 ತರಗತಿಗಳಿಗೆ ಆನ್ ಲೈನ್ ಶಿಕ್ಷಣ ಬೇಡ ಎಂದು ಸಂಪುಟ ಒಮ್ಮತದ ತೀರ್ಮಾನ ಮಾಡಿತು. ಅದಲ್ಲದೆ 8ನೇ ತರಗತಿ ಹಾಗೂ 9ನೇ ತರಗತಿ ಆನ್ ಲೈನ್ ಕ್ಲಾಸ್ ನಡೆಯುತ್ತಿದೆ. ಇದನ್ನೂ ನಿಲ್ಲಿಸಬೇಕೇ ಅಥವಾ ಬೇಡವೇ ಎನ್ನುವುದರ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.