ಕರಾವಳಿ
ಕುಂದಾಪುರ ಹಾಡಹಗಲೇ ಗ್ರಾ. ಪಂ. ಅಧ್ಯಕ್ಷೆ ಮನೆಯಲ್ಲಿ ಕಳವು

ಕುಂದಾಪುರ: ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯ ಮಡಾಮಕ್ಕಿ ಗ್ರಾಮ ಪಂಚಾಯತ್ನ ಅಧ್ಯಕ್ಷೆ ಮನೆಗೆ ಅ. 21ರಂದು ಹಾಡಹಗಲೇ ನುಗ್ಗಿ ಅಪಾರ ಮೌಲ್ಯದ ನಗನಗದು ಕಳವು ಮಾಡಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.
ಗ್ರಾಪಂ ಅಧ್ಯಕ್ಷೆ ಜಯಲಕ್ಷ್ಮಿ ನಾಯಕ್ ಅವರು ಕಚೇರಿಗೆ ಹೋಗಿದ್ದ ವೇಳೆ ಮನೆಯ ಎದುರಿನ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು, ಮೊಬೈಲ್, ಉಂಗುರ ಹಾಗೂ 45000ರೂ. ನಗದು ಕಳವು ಮಾಡಿದ್ದಾರೆ. ಇವುಗಳ ಒಟ್ಟು ಮೌಲ್ಯ 90000ರೂ. ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.