ಕರಾವಳಿ
ಯುವಕನೊಬ್ಬ ಮನೆಯ ಮಹಡಿಯಿಂದ ಬಿದ್ದು ಸಾವು

ಮಂಗಳೂರು: ಸೋಮವಾರ ರಾತ್ರಿ ಯುವಕನೊಬ್ಬ ಮನೆಯ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ನಡೆದಿದೆ.
ಕುದ್ರೋಳಿ ಸಮೀಪದ ಕಂಡತ್‌ಪಳ್ಳಿ ಬಳಿಯಲ್ಲಿ ತರಕಾರಿ ಅಂಗಡಿ ಹೊಂದಿರುವ ಟಿಕೆಎಚ್ ಖಾದರ್ ಎಂಬವರ ಪುತ್ರ ಮುಹಮ್ಮದ್ ರಿಯಾಝ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಮುಹಮ್ಮದ್ ರಿಯಾಝ್ ಅವರು ಸಮೀಪದ ಮನೆಯೊಂದರ ಮಹಡಿ ಹತ್ತಿದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡರು ಎಂದು ಹೇಳಲಾಗಿದ್ದು, ತಕ್ಷಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.