ಅ.28: ಜಿಲ್ಲಾ ಬಿಜೆಪಿಯಿಂದ ಮಣಿಪಾಲ ರಜತಾದ್ರಿಯ ಡಾ! ವಿ.ಎಸ್.ಆಚಾರ್ಯ ಪುತ್ಥಳಿ ಬಳಿ “ಕೋಟಿ ಕಂಠ ಗಾಯನ”
ಉಡುಪಿ: ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಇಂದನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅ.28ರಂದು ರಾಜ್ಯಾದ್ಯಂತ ಹಮ್ಮಿಕೊಂಡಿರುವ “ಕೋಟಿ ಕಂಠ ಗಾಯನ” ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವಿನೂತನ ರೀತಿಯಲ್ಲಿ ಭಾಗವಹಿಸಲಿದೆ.
ಅ.28 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಮಣಿಪಾಲದ ರಜತಾದ್ರಿ ಬಳಿ ಇರುವ ಡಾ! ವಿ.ಎಸ್. ಆಚಾರ್ಯ ರವರ ಪುತ್ಥಳಿಯ ಬಳಿ ಸುಮಾರು 500 ಮಂದಿ ಬಿಜೆಪಿ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಸೇರಿ ‘ಕನ್ನಡ ಶಾಲು ಮತ್ತು ಟೋಪಿ’ಗಳನ್ನು ಧರಿಸಿ ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ನಿಗದಿಪಡಿಸಿರುವ ಆರು ಕನ್ನಡ ಹಾಡುಗಳನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ನೇತೃತ್ವದಲ್ಲಿ ಸಾಮೂಹಿಕವಾಗಿ ಹಾಡಲಿದ್ದಾರೆ.
ಈ ವಿನೂತನ ಸಾಮೂಹಿಕ ಗಾಯನ ಕಾರ್ಯಕ್ರಮವನ್ನು ಡ್ರೋನ್ ಕ್ಯಾಮರಾ ಮೂಲಕ ಚಿತ್ರೀಕರಿಸಿ, ನಿಗದಿತ ಲಿಂಕ್ ಮೂಲಕ ‘ಕೋಟಿ ಕಂಠ ಗಾಯನ’ ಆಯೋಜಕ ತಂಡಕ್ಕೆ ಕಳುಹಿಸಿಕೊಡಲಾಗುವುದು.
ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಈಗಾಗಲೇ ವಾಟ್ಸಾಪ್ ಗ್ರೂಪ್ ಮೂಲಕ ಕಳುಹಿಸಿಕೊಟ್ಟಿರುವ ನಿಗದಿತ ಆರು ಹಾಡುಗಳನ್ನು ಅಭ್ಯಾಸ ಮಾಡುವ ಮೂಲಕ ಅ.28ರ ಸಾಮೂಹಿಕ ಗಾಯನದಲ್ಲಿ ಭಾಗವಹಿಸಿ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.