ಕರಾವಳಿ
ಮಂಗಳೂರು : ದ್ವಿಚಕ್ರ ವಾಹನವನ್ನು ರಸ್ತೆ ಪಕ್ಕ ನಿಲ್ಲಿಸಿ ವಾಕಿಂಗ್ ನಿರತರಾಗಿದ್ದ ವೇಳೆ ಲಾರಿ ಢಿಕ್ಕಿ, ಪಾದಚಾರಿ ಸಾವು

ಮಂಗಳೂರು: ಲಾರಿ ಡಿಕ್ಕಿಯಾಗಿ ಪಾದಚಾರಿಯೊಬ್ಬರು
ಮೃತಪಟ್ಟ ಘಟನೆ ಕೊಟ್ಟಾರ ಚೌಕಿಯಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ಅಶೋಕನಗರದ ನಿವಾಸಿ ಎನ್ನಲಾದ ಸುಮಾರು 40-45
ವರ್ಷ ಪ್ರಾಯದ ವ್ಯಕ್ತಿಯೊಬ್ಬರು ತನ್ನ ದ್ವಿಚಕ್ರ ವಾಹನವನ್ನು ಕೊಟ್ಟಾರ ಚೌಕಿಯಲ್ಲಿ ರಸ್ತೆ ಪಕ್ಕ ನಿಲ್ಲಿಸಿ ವಾಕಿಂಗ್ ನಿರತರಾಗಿದ್ದ ವೇಳೆ ಹರ್ಯಾಣದ ನೋಂದಣಿ ಹೊಂದಿದ ಲಾರಿ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಲಾರಿ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಗಂಭೀರ
ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು
ಬಂದಿದೆ.