ನ.7ರ ಉಡುಪಿ ಜಿಲ್ಲೆಯ ‘ಜನ ಸ್ಪಂದನ ಸಮಾವೇಶ’ ಯಶಸ್ವಿಗೊಳಿಸಲು ಕುಯಿಲಾಡಿ ಕರೆ
ಉಡುಪಿ : ನ.7ರಂದು ಬೆಳಿಗ್ಗೆ 10.00 ಗಂಟೆಗೆ ಕಾಪು ಬಸ್ ನಿಲ್ದಾಣದ ಬಳಿ ಹಾಗೂ ಸಂಜೆ 4.00 ಗಂಟೆಗೆ ತ್ರಾಸಿ ರಾ.ಹೆ. ಬಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುವ ಜನ ಸ್ಪಂದನ ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸುವಂತೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು.
ಅವರು ಶುಕ್ರವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಜನ ಸ್ಪಂದನ ಸಮಾವೇಶದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಡುಪಿ ಜಿಲ್ಲೆಯ ಕಾಪು ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುವ ಜನಸ್ಪಂದನ ಸಮಾವೇಶದಲ್ಲಿ ಆಯಾ ಕ್ಷೇತ್ರದ ಸಹಿತ ಕಾರ್ಕಳ, ಉಡುಪಿ ಮತ್ತು ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುಮಾರು 10,000ಕ್ಕೂ ಮಿಕ್ಕಿ ಫಲಾನುಭವಿಗಳು, ಸಾರ್ವಜನಿಕ ಬಂಧುಗಳು, ಪಕ್ಷದ ಮುಖಂಡರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಭಾಗವಹಿಸಲಿದ್ದಾರೆ.
ಜನಸ್ಪಂದನ ಸಮಾವೇಶಕ್ಕೆ ಸಮಾರೋಪಾದಿಯಲ್ಲಿ ಸಿದ್ಧತೆಗಳು ನಡೆಯುತ್ತಿದ್ದು ಪ್ರತೀ ಶಕ್ತಿಕೇಂದ್ರ ವ್ಯಾಪ್ತಿಗೆ ಉಸ್ತುವಾರಿಗಳನ್ನು ನೇಮಿಸಲಾಗಿದೆ. ಪ್ರತೀ ಬೂತ್ ಮಟ್ಟದಿಂದ ವಿವಿಧ ಯೋಜನೆಗಳ ಫಲಾನುಭವಿಗಳು, ಕಾರ್ಯಕರ್ತರು ಮತ್ತು ಪಕ್ಷದ ಹಿತೈಷಿಗಳು ಭಾಗವಹಿಸಲಿದ್ದಾರೆ ಎಂದು ಕುಯಿಲಾಡಿ ತಿಳಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಶಕ್ತಿಕೇಂದ್ರ ಉಸ್ತುವಾರಿಗಳ ಸಭೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿ ಚುನಾವಣಾ ಪೂರ್ವಭಾವಿಯಾಗಿ ನಡೆಯುವ ಈ ಜನಸ್ಪಂದನ ಸಮಾವೇಶವು ಅತ್ಯಂತ ಮಹತ್ವಪೂರ್ಣವಾಗಿದ್ದು ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಸಂಘಟಿತರಾಗಿ ತೊಡಗಿಸಿಕೊಂಡು ಜನಸ್ಪಂದನ ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಸುಪ್ರಸಾದ್ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಎಮ್. ಸುವರ್ಣ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಸಲೀಂ ಅಂಬಾಗಿಲು, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ, ಜಿಲ್ಲಾ ವಕ್ತಾರ ರಾಘವೇಂದ್ರ ಕಿಣಿ, ಜಿಲ್ಲಾ ಸಹ ವಕ್ತಾರರಾದ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಉಡುಪಿ ನಗರ ಮಂಡಲಾಧ್ಯಕ್ಷ ಮಹೇಶ್ ಠಾಕೂರ್, ಕಾಪು ಮಂಡಲಾಧ್ಯಕ್ಷ ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ನಳಿನಿ ಪ್ರದೀಪ್ ರಾವ್, ಗುರುಪ್ರಸಾದ್ ಶೆಟ್ಟಿ, ಅನಿತಾ ಶ್ರೀಧರ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯಕುಮಾರ್ ಉದ್ಯಾವರ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಅಮೀನ್, ಗೋಪಾಲಕೃಷ್ಣ ರಾವ್, ಅನಿಲ್ ಶೆಟ್ಟಿ ಮಾಂಬೆಟ್ಟು, ಮೋರ್ಚಾ, ಮಂಡಲ, ಪ್ರಕೋಷ್ಠ, ಮಹಾ ಶಕ್ತಿಕೇಂದ್ರಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.