ನವದೆಹಲಿ: ದೆಹಲಿಯಿಂದ ಬೆಂಗಳೂರಿಗೆ ಟೇಕ್ ಆಫ್ ಆಗಬೇಕಿದ್ದ ಇಂಡಿಗೋ ವಿಮಾನದ ಇಂಜಿನ್ ಗೆ ಬೆಂಕಿ ತಗುಲಿದ ಪರಿಣಾಮ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಿದ ಘಟನೆ ವರದಿಯಾಗಿದೆ.
ಶುಕ್ರವಾರ ರಾತ್ರಿ ಇಂಡಿಗೋ ವಿಮಾನ 6e-2131 ಟೇಕ್ ಆಫ್ ಆಗುವ ವೇಳೆ ದಿಢೀರನೇ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನದ ಸಿಬ್ಬಂದಿ ಸೇರಿ ಎಲ್ಲ 184 ಮಂದಿ ಸುರಕ್ಷಿತವಾಗಿದ್ದಾರೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಬೆಂಕಿ ತಗುಲಿದ ತಕ್ಷಣ ವಿಮಾನವನ್ನು ನಿಲ್ಲಿಸಿ, ಪ್ರಯಾಣಿಕರನೆಲ್ಲ ಸ್ಥಳಾಂತರ ಮಾಡಿ, ರಾತ್ರಿ 11 ಗಂಟೆಗೆ ಮತ್ತೊಂದು ವಿಮಾನದಲ್ಲಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ.
ಪ್ರಯಾಣಿಕರಲ್ಲಿ ಒಬ್ಬರಾದ ಪ್ರಿಯಾಂಕಾ ಕುಮಾರ್ ಎಂಬವರು ಘಟನೆಯ ವಿಡಿಯೋವನ್ನು ತಮ್ಮ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದು, ವಿಮಾನದ ಇಂಜಿನ್ ಗಳಲ್ಲಿ ಒಂದಕ್ಕೆ ಬೆಂಕಿ ಹೊತ್ತಿಕೊಂಡು, ಕಿಡಿಗಳು ಹಾರುತ್ತಿರುವ ದೃಶ್ಯ ವಿಡಿಯೋದಲ್ಲಿದೆ. 👇
Delhi-Bangalore IndiGo flight grounded after sparks during take-off run, filmed by passenger: pic.twitter.com/bZL8qjrjga
— Shiv Aroor (@ShivAroor) October 28, 2022