ಸರ್ಕಾರಿ ವೈದ್ಯರಿಗೆ 3 ಬಾರಿ ಬಯೋ ಮೆಟ್ರಿಕ್ ಹಾಜರಿ ಕಡ್ಡಾಯ’ – ಡಾ.ಕೆ. ಸುಧಾಕರ್
ಮೈಸೂರು, : ಸರ್ಕಾರಿ ವೈದ್ಯರು ತಮ್ಮ ಕರ್ತವ್ಯದ ಅವಧಿಯಲ್ಲಿ ಖಾಸಗಿ ಆಸ್ಪತ್ರೆ ಅಥವಾ ಕ್ಲಿನಿಕ್ ಗಳಲ್ಲಿ ಕಾರ್ಯನಿರತರಾಗಿದ್ದಾರೆ ಅಂಥವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಹಾಗೂ ಬಯೋಮೆಟ್ರಿಕ್ ಹಾಜರಾತಿ ಪದ್ಧತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ತಮ್ಮ ಕರ್ತವ್ಯದ ಅವಧಿಯಲ್ಲಿ ಖಾಸಗಿ ಮತ್ತು ಕ್ಲಿನಿಕ್ ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಇದಕ್ಕೆ ಕಡಿವಾಣ ಹಾಕಲು ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆ ಹೀಗೆ ಮೂರು ಬಾರಿ ವೈದ್ಯರು ಬಯೋಮೆಟ್ರಿಕ್ ಹಾಜರಿ ಹಾಕುವುದು ಕಡ್ಡಾಯಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ವೈದ್ಯರು ನಿಯಮಗಳನ್ನು ಉಲ್ಲಂಘಿಸದಂತೆ ಜಿಯೋ ಟ್ಯಾಗ್ ಅಳವಡಿಸುವ ಹಾಗೂ ಕಚೇರಿ ಅವಧಿ ಮುಗಿದ ಬಳಿಕ ಕಾಲೇಜಿನಲ್ಲಿಯೇ ಖಾಸಗಿಯ ಚಿಕಿತ್ಸೆ ನೀಡುವ ಅವಕಾಶವನ್ನು ವೈದ್ಯರಿಗೆ ನೀಡುವ ಚಿಂತನೆ ಸರ್ಕಾರದ ಮುಂದಿದೆ ಎಂದು ತಿಳಿಸಿದರು.