ಜೇನುಗಾರಿಕೆ ತರಬೇತಿ: ಅರ್ಜಿ ಆಹ್ವಾನ
ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ
ಸಾಲಿನಲ್ಲಿ ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ನವೆಂಬರ್ 14 ರಿಂದ 2023 ಫೆಬ್ರವರಿ 15 ರ ವರೆಗೆ ನಡೆಯಲಿರುವ 3 ತಿಂಗಳ ಜೇನುಗಾರಿಕೆ ತರಬೇತಿಗೆ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ, 18 ರಿಂದ 35 ವರ್ಷ ವಯಸ್ಸಿನ ಪುರುಷ ಅಭ್ಯರ್ಥಿಗಳು ಅರ್ಜಿ
ಸಲ್ಲಿಸಬಹುದಾಗಿದ್ದು, ತರಬೇತಿ ಬಯಸುವ ಅಭ್ಯರ್ಥಿಯ
ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು, ಸ್ವಂತ ಸಾಗುವಳಿ ಮಾಡುತ್ತಿರಬೇಕು.
ಅರ್ಜಿ ಸಲ್ಲಿಸಲು ನವೆಂಬರ್ 5 ಕೊನೆಯ ದಿನ. ಅರ್ಜಿ
ನಮೂನೆಯನ್ನು ಇಲಾಖಾ ವೆಬ್ಸೈಟ್ https://horticulturedir.karnataka.gov.ಇನ್ ಅಥವಾ ತೋಟಗಾರಿಕೆ ಇಲಾಖೆಯ ತಾಲೂಕು ಮತ್ತು ಜಿಲ್ಲಾ ಮಟ್ಟದ ಕಚೇರಿಗಳಲ್ಲಿ ಪಡೆಯಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಉಪನಿರ್ದೇಶಕರು ಉಡುಪಿ ದೂ.ಸಂಖ್ಯೆ: 0820-2531950 ಹಾಗೂ ಉಡುಪಿ ದೂ.ಸಂಖ್ಯೆ: 0820-2522837, ಕುಂದಾಪುರ ದೂ.ಸಂಖ್ಯೆ: 08254-230813 ಮತ್ತು ಕಾರ್ಕಳ ದೂ.ಸಂಖ್ಯೆ: 08258-230288 ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.