ರಾಜ್ಯ
ನದಿಯಲ್ಲಿ ಈಜಲು ಹೋದ ವ್ಯಕ್ತಿ ಮೊಸಳೆಗಳ ಬಾಯಿಗೆ ತುತ್ತು.
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕುಳಗಿ ರಸ್ತೆಯ ಈಶ್ವರ ದೇವಸ್ಥಾನದ ಬಳಿ ನ.3ರಂದು ಕಾಳಿ ನದಿಯಲ್ಲಿ ಈಜಲು ಹೋದ ವ್ಯಕ್ತಿಯನ್ನು ಮೊಸಳೆಗಳು ಎಳೆದೊಯ್ದ ಘಟನೆ ನಡೆದಿದೆ.
ಬೆಳಗ್ಗೆ ಕಾಳಿ ನದಿಯಲ್ಲಿ ಈಜಲು ಗುಜರಾತ್ ಮೂಲದ ದಾಂಡೇಲಿ ನಿವಾಸಿ ಪೀತಾಂಬರಿ ದಾಸ್ ಎಂಬಾತ ತೆರಳಿದ್ದ. ದಂಡೆಯ ಮೇಲೆ ಚಪ್ಪಲಿ, ಬಟ್ಟೆಯನ್ನು ಇಟ್ಟು ನದಿಯಲ್ಲಿ ಇಳಿದಿದ್ದಾನೆ. ಈ ವೇಳೆ 2 ಮೊಸಳೆಗಳು ಈತನ ಮೇಲೆ ದಾಳಿ ನಡೆಸಿ ಎಳೆದೊಯ್ದಿದೆ.
ಈ ಘಟನೆಯನ್ನು ಸ್ಥಳೀಯರು ನೋಡಿ ಸಂಬಂಧಿಸಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ವ್ಯಕ್ತಿಯ ಶವಕ್ಕಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.