ರಾಜ್ಯ
ಸುಳ್ಯದಲ್ಲಿ 7ವರ್ಷದ ಬಾಲಕ ಹೃದಯಾಘಾತದಿಂದ ಮೃತ್ಯು
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಹೃದಯಾಘಾತದಿಂದ ಶಾಲಾ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಾವನ್ನಪ್ಪಿದ ಬಾಲಕ ಅಮರಮುಟ್ನೂರು ಗ್ರಾಮದ ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯ 2ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್ ಕೆ.ಸಿ. ಎಂದು ತಿಳಿದು ಬಂದಿದೆ.
ಬಾಲಕ ಎಂದಿನಂತೆ ಶಾಲೆಗೆ ಬಂದಿದ್ದು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದನು. ಮಧ್ಯಾಹ್ನದ ವೇಳೆಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕರು ದೂರವಾಣಿ ಮೂಲಕ ಪೋಷಕರಿಗೆ ಮಾಹಿತಿ ನೀಡಿದರು.
ತಂದೆ ಚಂದ್ರಶೇಖರ ಆಚಾರ್ಯ ಅವರು ಶಾಲೆಗೆ ಬಂದಿರುವ ಸಂದರ್ಭದಲ್ಲೇ ಬಾಲಕ ನಿಂತಲ್ಲಿಯೇ ಕುಸಿದು ಬಿದ್ದಿದ್ದು, ತತ್ಕ್ಷಣ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ವೈದ್ಯರು ಪರೀಕ್ಷಿಸಿದಾಗ ಬಾಲಕನಿಗೆ ಹೃದಯಾಘಾತ ಸಂಭವಿಸಿದ್ದರಿಂದ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.