ರಾಷ್ಟ್ರೀಯ
ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇಕಡ 10 ಮೀಸಲಾತಿ ಎತ್ತಿ ಹಿಡಿದ ಸುಪ್ರೀಂ ಕೋರ್ಟ್
ನವದೆಹಲಿ: ಸುಪ್ರೀಂ ಕೋರ್ಟಿನ ಸಂವಿಧಾನಿಕ ಪೀಠ
ಮೀಸಲಾತಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಿದೆ. ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇಕಡ 10 ಮೀಸಲಾತಿ ಸಂವಿಧಾನದ ಉಲ್ಲಂಘನೆಯಲ್ಲ ಎಂದು ಬಹುಮತದ ತೀರ್ಪು ನೀಡಿದೆ. ಐವರು ನ್ಯಾಯಮೂರ್ತಿಗಳ ಪೈಕಿ ಮೂವರು ಮೀಸಲಾತಿಯನ್ನು ಬೆಂಬಲಿಸಿದ್ದಾರೆ. ಇಬ್ಬರುnವಿರೋಧ ವ್ಯಕ್ತಪಡಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ನೇತೃತ್ವದ ಐವರು ಸದಸ್ಯರ ಪೀಠ ಈ ತೀರ್ಪು ನೀಡಿದೆ. ಮೂರು ವರ್ಷಗಳ ಹಿಂದೆ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇಕಡ 10 ಮೀಸಲಾತಿ ಕಲ್ಪಿಸಿತ್ತು, ಇದನ್ನು ಪ್ರಶ್ನಿಸಿ 40ಕ್ಕೂ ಹೆಚ್ಚು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಲಾಗಿತ್ತು.