ಕರಾವಳಿ

ನಿಷೇಧಿತ ಪ್ಲಾಸ್ಟಿಕ್ ಬಳಕೆ- ಉಡುಪಿ ನಗರಸಭೆಯಿಂದ ಕಾರ್ಯಾಚರಣೆ

ಉಡುಪಿ: ಉಡುಪಿ ನಗರಸಭೆಯಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಅಂಗಡಿಗಳಿಗೆ ಕಾರ್ಯಾಚರಣೆ ಮಾಡಿದ್ದು, ಸುಮಾರು 45 ಕೆ.ಜಿ ಯಷ್ಟು ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು ರೂಪಾಯಿ 10,200 ದಂಡವನ್ನು ವಿಧಿಸಲಾಗಿರುತ್ತದೆ.

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಉತ್ಪಾದಕರು, ದಾಸ್ತಾನುದಾರರು, ಚಿಲ್ಲರೆ ಅಂಗಡಿ ಮಾಲೀಕರುಗಳು, ಇ-ಕಾಮರ್ಸ್ ಕಂಪೆನಿಗಳು, ಬೀದಿ ವ್ಯಾಪಾರಿಗಳು, ವಾಣಿಜ್ಯ ಸಂಸ್ಥೆಗಳು (ಮಾಲ್‌ಗಳು, ಮಾರುಕಟ್ಟೆ ಸ್ಥಳ), ಶಾಪಿಂಗ್ ಕೇಂದ್ರಗಳು, ಸಿನಿಮಾ ಮಾಲ್‌ಗಳು, ಮನೆಗಳು, ಪ್ರವಾಸೋದ್ಯಮ ಸ್ಥಳಗಳು, ಶಾಲೆಗಳು, ಕಾಲೇಜುಗಳು, ಕಛೇರಿ ಸಂಕೀರ್ಣಗಳು, ಆಸ್ಪತ್ರೆಗಳು, ಇತರೆ ಸಂಸ್ಥೆಗಳು ಮತ್ತು ಸಾಮಾನ್ಯ ಸಾರ್ವಜನಿಕರಿಗೆ ಸೂಚಿಸಿದ್ದು, ಬಳಕೆ ಮಾಡುವ ವ್ಯಾಪಾರಿಗಳಿಗೆ ದಂಡ ವಿಧಿಸಿ ಪರವಾನಿಗೆಯನ್ನು ರದ್ದುಗೊಳಿಸಲಾಗುವುದು.

ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವ
ಸಾರ್ವಜನಿಕರಿಗೂ ದಂಡ ವಿಧಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!