ರಾಜ್ಯ

ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ನಿಧನರಾಗಿದ್ದಾರೆ.

ನಟ ಲೋಹಿತಾಶ್ವ ವಯೋಸಹಜ ಕಾಯಿಲೆಯಿಂದ
ಬಳಲುತ್ತಿದ್ದರು. ಕುಮಾರಸ್ವಾಮಿ ಲೇಔಟ್ ಸಾಗರ್ ಅಪೊಲೋ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಹಲವು ದಿನಗಳಿಂದ ಆಸ್ಪತ್ರೆ ಸೇರಿದ್ದ ಅವರು ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.

ಕನ್ನಡದಲ್ಲಿಯೇ ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದರು. ಅವರ ನಿಧನದ ಸುದ್ದಿ ತಿಳಿದು ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!