ಮತದಾರರ ಪಟ್ಟಿಯಲ್ಲಿ ಹೆಸರು ಖಚಿತಪಡಿಸಿಕೊಳ್ಳಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ : ಎಪಿಕ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಪರಿಶೀಲಿಸಿ, ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.
ಅವರು ಬುಧವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಉಡುಪಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅಂಗವಾಗಿ ಉಡುಪಿಯ ಬನ್ನಂಜೆಯಿAದ ಅಜ್ಜರಕಾಡು ಹುತಾತ್ಮ ಸ್ಮಾರಕದವರೆಗೆ ನಡೆದ ಜಾಥಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿ ಮಾತನಾಡಿದರು.
ಚುನಾವಣೆಯಲ್ಲಿ ಮತ ಚಲಾಯಿಸಲು ಎಪಿಕ್ ಕಾರ್ಡ್ ಇದ್ದರೆ ಮಾತ್ರ ಸಾಲದು. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಆಗಿರುವುದು ಅಗತ್ಯವಾಗಿದೆ. ಆದ್ದರಿಂದ ಎಲ್ಲಾ ಮತದಾರರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಪರಿಶೀಲಿಸಿ, ಖಚಿತಪಡಿಸಿಕೊಳ್ಳಬೇಕು. ನವೆಂಬರ್ 9 ರಿಂದ ಡಿಸೆಂಬರ್ 8 ರವರೆಗೆ ನಡೆಯುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಈ ಸಂದರ್ಭದಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆ, ವಿಳಾಸ ಬದಲಾವಣೆ, ವರ್ಗಾವಣೆ, ಮತ್ತಿತರ ಅಗತ್ಯ ತಿದ್ದುಪಡಿಗಳನ್ನು ಮಾಡಿಕೊಳ್ಳಲು ಹಾಗೂ ಆಕ್ಷೇಪಗಳನ್ನು ಸಲ್ಲಿಸಲು ಕೂಡಾ ಅವಕಾಶವಿದೆ ಎಂದರು.
18 ವರ್ಷ ತುಂಬಿದ ಎಲ್ಲಾ ಯುವಜನತೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆಗೊಳಿಸಬೇಕು. ವೋಟರ್ ಹೆಲ್ಪ್ಲೈನ್ ಆಪ್ ಮೂಲಕವೂ ಮತದಾರರ ಪಟ್ಟಿಗೆ ಸಂಬAಧಿಸಿದ ಹಲವು ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಯಾವುದೇ ಸಮಸ್ಯೆಗಳಿದ್ದಲ್ಲಿ ಮತದಾರರ ಉಚಿತ ಸಹಾಯವಾಣಿ ಸಂಖ್ಯೆ 1950 ನ್ನು ಸಂಪರ್ಕಿಸಬಹುದು ಎಂದರು.
ಕಾರ್ಯಕ್ರಮದಲ್ಲಿ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್, ಉಡುಪಿ ತಹಶೀಲ್ದಾರ್ ಮಹೇಶ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಉಡುಪಿ ತಾಲೂಕು ಸಮಾಜ ಕಲ್ಯಾಣಾಧಿಕಾರಿ ರಮೇಶ್, ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕ ಶಿವಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ನೆಹರು ಯುವ ಕೇಂದ್ರದ ಸಮನ್ವಯಾಧಿಕಾರಿ ವಿಲ್ಪೆçಡ್ ಡಿಸೋಜಾ ಸ್ವಾಗತಿಸಿ, ವಂದಿಸಿದರು.