ಕರಾವಳಿ

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ, : ಜಿಲ್ಲೆಯಲ್ಲಿ ನವೆಂಬರ್ 9 ರಿಂದ ಡಿಸೆಂಬರ್ 8 ರವರೆಗೆ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಮಾಡಲಾಗುತ್ತಿದ್ದು, ಸಾರ್ವಜನಿಕರು ಈಗಾಗಲೇ ಪ್ರಕಟಿಸಿರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಿಕೊಂಡು ಖಚಿತಪಡಿಸಿಕೊಳ್ಳುವುದರ ಜೊತೆಗೆ ಅಗತ್ಯ ತಿದ್ದುಪಡಿ ಮಾಡಿಕೊಳ್ಳಲು ಕೂಡಾ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.

ಅವರು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಈ ಸಂದರ್ಭದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ , ಏನಾದರೂ ಬದಲಾವಣೆಗಳಿದ್ದಲ್ಲಿ, ಮತದಾರರ ಪಟ್ಟಿಯಿಂದ ಹೆಸರು ಕೈ ಬಿಟ್ಟಿದ್ದಲ್ಲಿ ಕೂಡಲೇ ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು, ಇಲ್ಲವಾದಲ್ಲಿ ಮತದಾನದ ದಿನ ಯಾವುದೇ ರೀತಿಯ ಬದಲಾವಣೆಗೆ ಅವಕಾಶಗಳಿರುವುದಿಲ್ಲ ಎಂದರು.

ಜಿಲ್ಲೆಯಲ್ಲಿ ಈಗಾಗಲೇ ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯ ಪ್ರಕಾರ ಬೈಂದೂರು ವಿಧಾನ ಸಭಾ ಕ್ಷೇತ್ರದಲ್ಲಿ 2,27,134, ಕುಂದಾಪುರ 2,02,808, ಉಡುಪಿ 2,09,187, ಕಾಪು 1,81,831, ಕಾರ್ಕಳದಲ್ಲಿ 1,84,492 ಸೇರಿದಂತೆ ಒಟ್ಟು 10,05,452 ಮತದಾರರಿದ್ದು, ಇದರಲ್ಲಿ 4,85,169 ಪುರುಷರು, 5,20,273 ಮಹಿಳೆಯರು, 10 ಮಂದಿ ಲಿಂಗತ್ವ ಅಲ್ಪಸಂಖ್ಯಾತ ಮತದಾರರಿದ್ದಾರೆ ಎಂದರು.

ಆನ್‌ಲೈನ್ ವೆಬ್ ಪೋರ್ಟಲ್ ತಿತಿತಿ.ಟಿvsಠಿ.iಟಿ ಹಾಗೂ ವೋಟರ್ ಹೆಲ್ಪ್ಲೈನ್ ಮೂಲಕ ಕೂಡಾ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮತ್ತು ತಿದ್ದುಪಡಿಗಳನ್ನು ಮಾಡಿಕೊಳ್ಳಲು ಅವಕಾಶವಿದ್ದು, ನವೆಂಬರ್ 12, 20, ಡಿಸೆಂಬರ್ 3 ಮತ್ತು 4 ರಂದು ಮತಗಟ್ಟೆ ಮಟ್ಟದ ಅಧಿಕಾರಿಗಳು ಮತಗಟ್ಟೆಯಲ್ಲಿ ಹಾಜರಿರಲಿದ್ದು ಮತದಾರರು ಮತದಾರರ ಪಟ್ಟಿಯ ಪರಿಶೀಲನೆ ಮತ್ತು ಅಗತ್ಯ ಮಾಹಿತಿ ಗಳನ್ನು ಪಡೆಯಬಹುದಾಗಿದೆ. ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಯಾಗಿರುವ ಬಗ್ಗೆ ವೆಬ್‌ಸೈಟ್ ವಿಳಾಸ ತಿತಿತಿ.uಜuಠಿi.ಟಿiಛಿ.iಟಿ ನಲ್ಲಿ ಸಹ ವೀಕ್ಷಿಸಬಹುದಾಗಿದ್ದು, ಈ ಬಗ್ಗೆ ಯಾವುದೇ ಸಮಸ್ಯೆಗಳಿದ್ದಲ್ಲಿ ಉಚಿತ ಸಹಾಯವಾಣಿ ಸಂಖ್ಯೆ 1950 ಸಹ ಸಂಪರ್ಕಿಸಬಹುದು ಎಂದರು.

ಮತದಾರರ ಪಟ್ಟಿಗೆ ಹೊಸದಾಗಿ 13529 ಮಂದಿ ಯುವ ಮತದಾರರು ಸೇರ್ಪಡೆಯಾಗಿದ್ದು, ಎಪಿಕ್ ಕಾರ್ಡ್ಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಮತದಾರರಿಗೆ ಕಳುಹಿಸಲಾಗುತ್ತಿದೆ. ಜಿಲ್ಲೆಯಲ್ಲಿ ಎಪಿಕ್ ಕಾರ್ಡ್ಗೆ ಆಧಾರ್ ಜೋಡಣೆ ಪ್ರಮಾಣವು 84.78% ಆಗಿದ್ದು, 852453 ಮಂದಿ ಜೋಡಣೆ ಮಾಡಿಕೊಂಡಿದ್ದಾರೆ, ಇಪಿ ಪ್ರಮಾಣ 79.58% ಆಗಿದ್ದು, ಪರಿಷ್ಕರಣೆ ಸಂದರ್ಭದಲ್ಲಿ ಇದನ್ನು ಸರಿಪಡಿಸಲಾಗುವುದು ಎಂದರು.

ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್.ಮಾತನಾಡಿ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಯುವ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆ ಮಾಡುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್‌ಗಳ ಮೂಲಕ ವಿಶೇಷ ಕ್ಯಾಂಪ್ ಗಳನ್ನು ಮಾಡಲಾಗುತ್ತಿದೆ , ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಹ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ ಎಂದರು. ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!