ರಾಷ್ಟ್ರೀಯ

ವಿಮಾನ ಪ್ರಯಾಣದ ವೇಳೆ ಮಾಸ್ಕ್ ಕಡ್ಡಾಯವಲ್ಲ: ಕೇಂದ್ರ ಸರ್ಕಾರ

ನವದೆಹಲಿ : ವಿಮಾನ ಪ್ರಯಾಣದ ಸಮಯದಲ್ಲಿ ಮಾಸ್ಕ್‌(Mask) ಬಳಕೆ ಕಡ್ಡಾಯವಲ್ಲ. ಆದರೆ ಕೊರೊನಾವೈರಸ್ (Coronavirus) ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವ ನಡುವೆಯೂ ಪ್ರಯಾಣಿಕರು ಅವುಗಳನ್ನು ಬಳಸುವುದು ಉತ್ತಮ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಬುಧವಾರ ಹೇಳಿದೆ.

ಈ ಹಿಂದೆ ಫೇಸ್ ಕವರ್ ಗಳು ಕಡ್ಡಾಯವಾಗಿತ್ತು. ಪ್ರಯಾಣಕ್ಕೆ ನಿಗದಿಯಾಗಿರುವ ವಿಮಾನಗಳ ಸಂಸ್ಥೆಗಳಿಗೆ ಕಳಿಸಲಾಗಿರುವ ಪ್ರಕಟಣೆಯಲ್ಲಿ, ಮಾಸ್ಕ್ ಕಡ್ಡಾಯಗೊಳಿಸುವುದನ್ನು ಹಿಂಪಡೆಯುತ್ತಿರುವ ನಿರ್ಧಾರವನ್ನು COVID-19 ನಿರ್ವಹಣೆಯ ಪ್ರತಿಕ್ರಿಯೆಗೆ ಸರ್ಕಾರದ ಶ್ರೇಣೀಕೃತ ವಿಧಾನದ ನೀತಿಯ ಭಾಗವಾಗಿ ಕೈಗೊಳ್ಳಲಾಗಿದೆ. ಆದ್ದರಿಂದ ವಿಮಾನದ ಒಳಗಿನ ಪ್ರಕಟಣೆಯಲ್ಲಿ, ಪ್ರಯಾಣಿಕರು ತಮ್ಮ ಆಯ್ಕೆಯಿಂದ ಮಾಸ್ಕ್ ಧರಿಸುವುದು ಸೂಕ್ತ ಎಂಬುದಾಗಿ ಹೇಳಬೇಕೆಂದು ಸಚಿವಾಲಯ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!