ಕರಾವಳಿ
ಕಾರ್ಕಳ : ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದ ಕಾರು: ವಿದ್ಯಾರ್ಥಿ ಮೃತ್ಯು,
ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಣಿವೆಗೆ ಉರುಳಿದ ಘಟನೆ ತಾಲೂಕಿನ ಬೋಳ ಕೆದಿಂಜೆ ಸಮೀಪದ ಮಂಜರಪಲ್ಕೆಯಲ್ಲಿ ನಡೆದಿದೆ.
ಉಡುಪಿಯ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಪ್ರಥಮ ಪಿಯುಸಿ ವಿದ್ಯಾರ್ಥಿ ವೈಷ್ಣವ್ ಮೃತಪಟ್ಟರು ಎಂದು ತಿಳಿದುಬಂದಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ.
ಕಾರಿನಲ್ಲಿ ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು
ಸೇರಿದಂತೆ 7 ಮಂದಿ ಪ್ರಯಾಣಿಸುತ್ತಿದ್ದರು ಎಂದು
ತಿಳಿದು ಬಂದಿದೆ.
ಕುಟುಂಬದ ಸದಸ್ಯರೊಂದಿಗೆ ಬೆಂಗಳೂರಿಗೆ ಹೋಗಿ ಬರುವ ವೇಳೆ ಕಾರ್ಕಳದಿಂದ ಬೆಳ್ಳಣ್ ಕಡೆಗೆ ಸಾಗುತ್ತಿದ್ದ ಕಿಯಾ ಕಾರು ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿ ಬಿದ್ದಿದೆ. ಗಂಭೀರ ಗಾಯಗೊಂಡಿರುವವರನ್ನು ಕಾರ್ಕಳ ಸಿಟಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ
ದಾಖಲಾಗಿದೆ.