ನಿಟ್ಟೂರು ಪ್ರೌಢಶಾಲಾ ಹಳೆ ವಿದ್ಯಾರ್ಥಿಗಳು ನಿರ್ಮಿಸಿರುವ “ಶ್ರೀನಿವಾಸ” ನೂತನ ಗೃಹ ಉದ್ಘಾಟನೆ
ಉಡುಪಿ ಮೂಲದ ಬೆಂಗಳೂರು ಉದ್ಯಮಿ ಎಚ್. ಎಸ್ ಶೆಟ್ಟಿ ಅವರು ತನ್ನ ತಂದೆಯ ಹೆಸರಿನ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಮೂಲಕ ಕನ್ನಡ ಶಾಲೆಯ ಉಳಿವು – ಬೆಳವಣಿಗೆಗಾಗಿ ದೇಣಿಗೆ ನೀಡುವ ಮೂಲಕ ವಿಶೇಷ ರೀತಿಯಲ್ಲಿ ನಿರಂತರ ಪ್ರೋತ್ಸಾಹ ನೀಡುತ್ತಿದ್ದು, ಉಡುಪಿ ನಿಟ್ಟೂರು ಪ್ರೌಢಶಾಲೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ರೂ. 1 ಕೋಟಿ ಮೊತ್ತ ದೇಣಿಗೆಯಾಗಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಕೃತಜ್ಞತಾ ರೂಪದಲ್ಲಿ ಪ್ರೌಢಶಾಲಾ ಹಳೆ ವಿದ್ಯಾರ್ಥಿಗಳು ಸೇರಿ ನಿಟ್ಟೂರು ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 10ನೇ ತರಗತಿಯ ವಿದ್ಯಾರ್ಥಿ ದೀಕ್ಷಿತ್ ಇವರಿಗೆ ಕರಂಬಳ್ಳಿಯಲ್ಲಿ “ಶ್ರೀನಿವಾಸ” ಎಂಬ ಹೆಸರಿನಲ್ಲಿ ನೂತನ ಗೃಹ ನಿರ್ಮಿಸಿಕೊಟ್ಟಿದ್ದಾರೆ.
ಇಂದು ದಿನಾಂಕ 05-12-2022 ರಂದು ಈ ನೂತನ ಗೃಹ “ಶ್ರೀನಿವಾಸ” ಉದ್ಘಾಟನಾ ಸಮಾರಂಭದಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬೆಂಗಳೂರು ಮೈಸೂರು ಮರ್ಕೆಂಟೈಲ್ ಕಂಪನಿ ಲಿ. ಸಂಸ್ಥಾಪಕರಾದ ಎಚ್. ಎಸ್ ಶೆಟ್ಟಿ, ಯಕ್ಷಗಾನ ಕಲಾರಂಗ (ರಿ.) ಅಧ್ಯಕ್ಷರಾದ ಎಂ. ಗಂಗಾಧರ್ ರಾವ್, ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿಯ ಉಪಾಧ್ಯಕ್ಷರಾದ ನಾಗರಾಜ ಶೆಟ್ಟಿ, ನಗರ ಸಭಾ ಸದಸ್ಯರಾದ ಗಿರಿಧರ್ ಆಚಾರ್ಯ ಕರಂಬಳ್ಳಿ, ಜಯಂತಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ನಿಟ್ಟೂರು ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ನಿಟ್ಟೂರು ಪ್ರೌಢ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಯೋಗೀಶ್ಚಂದ್ರಾಧರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.