ಕರಾವಳಿ

ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾದಿಂದ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪರಿನಿರ್ವಾಣ ದಿನಾಚರಣೆ

ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ 66ನೇ ಪರಿನಿರ್ವಾಣ ದಿನವನ್ನು ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಆಚರಿಸಲಾಯಿತು.

ಉಡುಪಿ ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾ ಅಧ್ಯಕ್ಷ ಗೋಪಾಲ ಕಳಂಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ಆನಂದ ಮಟಪಾಡಿ, ಪ್ರಮುಖರಾದ ಹರಿದಾಸ್ ಕೆಮ್ಮಣ್ಣು, ಚಂದ್ರಶೇಖರ ಪ್ರಭು ಮುಂತಾದವರು ಉಪಸ್ಥಿತರಿದ್ದರು.

ಜಿಲ್ಲಾ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ಡಿ.ಬಿ. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ; ಸದಾನಂದ ಕೈಪುಂಜಾಲು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!