ಕರಾವಳಿ
ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ – ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತ್ಯು

ಕಾರ್ಕಳ: ಕಾರ್ಕಳ ಬಜಗೋಳಿ ಸಮೀಪದ ನೆಲ್ಲಿಕಾರು ಎಂಬಲ್ಲಿ ಶನಿವಾರ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಅಂದ್ರ ಮೂಲದ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಮೃತರು ಆಂಧ್ರ ಮೂಲದವರು ಎಂದು ತಿಳಿದುಬಂದಿದೆ. ಆಂಧ್ರಪ್ರದೇಶ ಮೂಲದ ಪತಿ, ಪತ್ನಿ ಮತ್ತು ಮಗು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.