ಕಿಶೋರ ಯಕ್ಷಗಾನ ಸಂಭ್ರಮ – 2022 ಸಮಾರೋಪ ಸಮಾರಂಭ

ಪರ್ಯಾಯ ಶ್ರೀ ಕೃಷ್ಣಾಪುರ ಮಠ, ಶ್ರೀ ಕೃಷ್ಣ ಮಠ, ಉಡುಪಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇದರ ವತಿಯಿಂದ ದಿನಾಂಕ 27-11-2022 ರಿಂದ 11-12-2022 ರ ವರೆಗೆ ನಡೆದ “ಕಿಶೋರ ಯಕ್ಷಗಾನ ಸಂಭ್ರಮ – 2022” ಸಮಾರೋಪ ಸಮಾರಂಭ ಇಂದು ದಿನಾಂಕ 12-12-2022 ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು.
ಯಕ್ಷ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರು, ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಭಾಗವಹಿಸಿದರು. ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಆಶೀರ್ವಚಿಸಿದರು.
ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ಅವರು ಸಾಧಕ ಶಿಕ್ಷಕ ಪ್ರಶಸ್ತಿ ಪ್ರಧಾನಗೈದರು.
ಈ ಸಂದರ್ಭದಲ್ಲಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಧರ್ಮದರ್ಶಿಗಳಾದ ನಿ. ಬೀ. ವಿಜಯ್ ಬಲ್ಲಾಳ್, ಪಣಂಬೂರ್ ವಾಸುದೇವ ಐತಾಳ್, ಪುತ್ತೂರು ಪ್ರವೀಣ್ ಶೆಟ್ಟಿ, ಡಯಟ್ ಪ್ರಾಂಶುಪಾಲರಾದ ಅಶೋಕ್ ಕಾಮತ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಡಿ.ಹೆಚ್. ಚಂದ್ರೇಗೌಡ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಂಗನಾಥ್ ಕೆ, ಶಿಕ್ಷಣಾಧಿಕಾರಿಗಳಾದ ಜಾಹ್ನವಿ, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ ಗಂಗಾಧರ ರಾವ್, ಯಕ್ಷ ಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಟ್ರಸ್ಟಿಗಳಾದ ಮೀನಾ ಲಕ್ಷ್ಮಣಿ ಅಡ್ಯಂತಾಯ ಉಪಸ್ಥಿತರಿದ್ದರು.