ಕರಾವಳಿ
ಸೇತುವೆ ಬಳಿ ಬೈಕ್ ಇಟ್ಟು ಸವಾರ ನಿಗೂಡ ನಾಪತ್ತೆ

ಬಂಟ್ವಾಳ: ಪಾಣೆಮಂಗಳೂರು ಹೊಸ ಸೇತುವೆ ಸಮೀಪ ಮಧ್ಯರಾತ್ರಿ ಬೈಕ್ ಚಾಲನೆಯಲ್ಲಿಟ್ಟು ಸವಾರ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾಗಿರು ಬೈಕ್ ಸವಾರನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳೀಯ ಈಜುಗಾರರು ಸವಾರನ ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ.
ಬೆಂಗಳೂರು ದಾಸರಹಳ್ಳಿ ನಿವಾಸಿ ಸತ್ಯವೇಲು (29) ನದಿಗೆ ಹಾರಿದ ಯುವಕ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸತ್ಯವೇಲು, ಈ ಮೊದಲೇ ಇಂಥ ಕೃತ್ಯ ಎಸಗಲು ಇದೇ ಜಾಗಕ್ಕೆ ಬಂದಿದ್ದಾಗ ಸ್ಥಳೀಯರು ರಕ್ಷಿಸಿದ್ದರು. ಬುಧವಾರ ಈತನ ಬೈಕ್ ಪಾಣೆಮಂಗಳೂರು ಸೇತುವೆ ಮೇಲೆ ಕಂಡುಬಂದಿದ್ದು, ಸ್ಥಳೀಯರು ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ.
ಈತನ ನಾಪತ್ತೆ ಕುರಿತು ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಬಂಟ್ವಾಳದಲ್ಲಿ ಎಲ್ಲಿಗೆ ಹೋದ ಎಂಬುದನ್ನು ಬಂಟ್ವಾಳ ಪೊಲೀಸರು ಶೋಧಿಸುತ್ತಿದ್ದಾರೆ.