ಬ್ರಹ್ಮಾವರದಲ್ಲಿ “ಕಿಶೋರ ಯಕ್ಷಗಾನ ಸಂಭ್ರಮ – 2022” ಸಮಾರೋಪ
ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇವರು ತರಬೇತಿ ನೀಡಿದ ಬ್ರಹ್ಮಾವರ ಭಾಗದ ಪ್ರೌಢಶಾಲೆಗಳ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ “ಕಿಶೋರ ಯಕ್ಷಗಾನ ಸಂಭ್ರಮ 2022” ಇದರ ಸಮಾರೋಪ ಸಮಾರಂಭ ಇಂದು ದಿನಾಂಕ 20-12-2022 ರಂದು ಬ್ರಹ್ಮಾವರ ಬಂಟರ ಭವನದ ಬಳಿ ನಡೆಯಿತು.
ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ, ಪ್ರದರ್ಶನ ಸಂಘಟನಾ ಸಮಿತಿ, ಬ್ರಹ್ಮಾವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರು ಆಯೋಜಿಸಿರುವ ಈ “ಕಿಶೋರ ಯಕ್ಷಗಾನ ಸಂಭ್ರಮ – 2022” ಬ್ರಹ್ಮಾವರದ ಬಂಟರ ಭವನದ ಬಳಿ ದಿನಾಂಕ 13-12-2022 ರಿಂದ 20-12-2022 ರ ವರೆಗೆ ಸಂಜೆ 5.30 ರಿಂದ 8.30 ರ ವರೆಗೆ ದಿನಕ್ಕೆ 2 ಪ್ರೌಢಶಾಲೆ ವಿದ್ಯಾರ್ಥಿಗಳಿಂದ 2 ಪ್ರಸಂಗಗಳಂತೆ ನಡೆಯಿತು.
ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇದರ ಅಧ್ಯಕ್ಷರು, ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಹಿರಿಯರ ವೇದಿಕೆಯ ಉದಯ್ ಕುಮಾರ್ ಶೆಟ್ಟಿ, ಅಜಪುರ ನಿತ್ಯಾನಂದ ಶೆಟ್ಟಿ, ಆರೂರು ನಾರಾಯಣ ಶೆಟ್ಟಿ, ವಾರಂಬಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ದೇವಾನಂದ, ಹಂದಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶೋಭಾ ಪೂಜಾರಿ, ಚಾಂತಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲಕ್ಷ್ಮೀ, ಯಕ್ಷಗಾನ ಕಲಾ ರಂಗದ ಉಪಾಧ್ಯಕ್ಷರಾದ ಎಸ್. ವಿ ಭಟ್, ವಿಶ್ವನಾಥ ಶಣೈ, ನಾರಾಯಣ ಹೆಗಡೆ, ಯಕ್ಷ ಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಬ್ರಹ್ಮಾವರ ಪ್ರದರ್ಶನ ಸಂಘಟನಾ ಸಮಿತಿಯ ಅಧ್ಯಕ್ಷರಾದ ಬಿರ್ತಿ ರಾಜೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಸುಧೀರ್ ಕುಮಾರ್ ಶೆಟ್ಟಿ, ಕೋಶಾಧಿಕಾರಿಗಳಾದ ಕಮಲಾಕ್ಷ್ ಹೆಬ್ಬಾರ್, ಉಪಸ್ಥಿತರಿದ್ದರು. ಚೇರ್ಕಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.