ರಾಷ್ಟ್ರೀಯ
ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸಿ ; ಕೇಂದ್ರ ಸರ್ಕಾರದ ಸಲಹೆ
ನವದೆಹಲಿ: ಚೀನಾದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದ ಪ್ರಸಕ್ತ ಪರಿಸ್ಥಿತಿ ಕುರಿತಂತೆ ಕೇಂದ್ರ ಆರೋಗ್ಯ ಖಾತೆ ಸಚಿವ ಮನ್ಸೂಕ್ ಮಾಂಡವೀಯ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.
ದೇಶದಲ್ಲಿ ಕೊರೋನಾ ಪರಿಸ್ಥಿತಿ ನಿಭಾಯಿಸಲು ಸರ್ಕಾರ ಸಜ್ಜಾಗಿದೆ ಎಂದು ಸಚಿವ ಮನ್ಸೂಖ್ ಮಾಂಡವೀಯ ತಿಳಿಸಿದರು.
ದೇಶದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಿದರೆ ಸೂಕ್ತ. ಇದು ರೋಗ ಹರಡುವುದನ್ನು ತಡೆಗಟ್ಟಲು ನೆರವಾಗಲಿದೆ.ಜನರು ಈ ನಿಟ್ಟಿನಲ್ಲಿ ಯೋಚಿಸಬೇಕು ಎಂದು ಆರೋಗ್ಯ ಇಲಾಖೆ ಹೇಳಿದೆ.