
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೊರೊನಾ ತ್ಯಾಜ್ಯ ವಿಲೇವಾರಿ ಮಾಡುವುದೇ ಸರ್ಕಾರದ ಪಾಲಿಗೆ ತಲೆನೋವಾಗಿ ಮಾರ್ಪಟ್ಟಿದೆ. ಪ್ರತಿದಿನ 3000 ಕೆಜಿ ಯಷ್ಟು ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಇದನ್ನು ವಿಲೇವಾರಿ ಮಾಡುವುದು ಕಷ್ಟವಾಗಿ ಪರಿಣಮಿಸಿದೆ.
ಮಾಹಿತಿಗಳ ಪ್ರಕಾರ ಜೂನ್ 12ರವರೆಗೆ ರಾಜ್ಯಾದ್ಯಂತ ಸುಮಾರು 2,89,369 ಕೆ.ಜಿ. ಕೋವಿಡ್ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗಿದೆ.ಪ್ರತಿ ದಿನ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ ಕ್ವಾರಂಟೈನ್ ಕೇಂದ್ರ, ಮನೆಗಳಿಗೆ ತೆರಳಿ ಅವರು ಬಳಸಿದ ಊಟದ ತಟ್ಟೆ, ಲೋಟ, ಬಟ್ಟೆ ಹಾಗೂ ಔಷಧ ಮೊದಲಾದವುಗಳನ್ನು ಸಂಗ್ರಹಿಸಿ ಸುರಕ್ಷಿತವಾಗಿ ಸಂಗ್ರಹಿಸಿ ವಿಲೇವಾರಿ ಮಾಡುತ್ತಿದ್ದಾರೆ . ಈ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಸಾರ್ವಜನಿಕರು ಮನೆಯಲ್ಲೇ ತಯಾರಿಸಿದ ಮರು ಬಳಕೆಯ ಮಾಸ್ಕ್ ಬಳಕೆಯನ್ನು ರೂಡಿಸಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಕರ್ನಾಟಕದಲ್ಲಿ ದಿನಂಪ್ರತಿ 3000 ಕೆಜಿ ಯಷ್ಟು ಕೊರೊನ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ.ಮಾಸ್ಕ್ , ಪಿಪಿಇ ಕಿಟ್ ,ಕೈ ಗವುಸುಗಳು ಇದರ ಮೂಲ.ಈ ತ್ಯಾಜ್ಯದ ವಿಲೇವಾರಿ ವೈಜ್ಞಾನಿಕವಾಗಿ ಆಗಬೇಕು ಅದು ಕ್ಲಿಷ್ಟಕರ ಕೂಡಾ ,ಈ ತ್ಯಾಜ್ಯಕಡಿಮೆ ಮಾಡಲು ಸಾರ್ವಜನಿಕರು ಮನೆಯಲ್ಲೇ ತಯಾರಿಸಿದ ಮರು ಬಳಕೆಯ ಮಾಸ್ಕ್ ಬಳಕೆಯನ್ನು ರೂಡಿಸಿಕೊಳ್ಳಬೇಕು ಎಂದು ಮನವಿ
— Dr Sudhakar K (@mla_sudhakar) June 16, 2020