ಕರಾವಳಿ

ರಾಷ್ಟೀಯ ಮಟ್ಟದ ಪ್ರೋ ಕಬಡ್ಡಿ “ಅಟಲ್ ಟ್ರೋಫಿ – 2022” – ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್, ರಾಜ್ಯ ಸಚಿವ ನಾರಾಯಣ ಗೌಡ ಅವರೊಂದಿಗೆ ಶಾಸಕ ರಘುಪತಿ ಭಟ್ ಉದ್ಘಾಟನೆ

ಮಾಜಿ ಪ್ರಧಾನ ಮಂತ್ರಿಗಳಾದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಮತ್ತು ಗ್ರಾಮಾಂತರ ಇವರ ವತಿಯಿಂದ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರ ನೇತೃತ್ವದಲ್ಲಿ  ದಿನಾಂಕ 24-12-2022 ರಂದು ಎಂ.ಜಿ.ಎಂ ಮೈದಾನದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಪ್ರೋ ಕಬಡ್ಡಿ ಪಂದ್ಯಾಟ “ಅಟಲ್ ಟ್ರೋಫಿ – 2022” ಉದ್ಘಾಟನೆಯನ್ನು ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ, ಯುವ ವ್ಯವಹಾರಗಳು ಮತ್ತು ಕೀಡಾ ಸಚಿವರಾದ ಅನುರಾಗ್ ಸಿಂಗ್ ಠಾಕೂರ್ ಅವರೊಂದಿಗೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಉದ್ಘಾಟಿಸಿದರು.

ರಾಜ್ಯ ಸರ್ಕಾರದ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ. ನಾರಾಯಣಗೌಡ ಅವರು ಕಬ್ಬಡಿ ಕೋರ್ಟ್ ಉದ್ಘಾಟನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಕಲ್ಮಾಡಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಉಪಾಧ್ಯಕ್ಷರಾದ ಶ್ರೀಶ ನಾಯಕ್, ರಾಜ್ಯ ಎಸ್. ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಕಾರ್ಯಕ್ರಮದ ಸಂಚಾಲಕರಾದ ರಾಘವೇಂದ್ರ ಕಿಣಿ, ಗಿರೀಶ್ ಅಂಚನ್, ಉಮೇಶ್ ನಾಯ್ಕ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ದಿನೇಶ್ ಅಮೀನ್, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!