ಕರಾವಳಿ

ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ತಿಳಿದಿರಬೇಕು : ನ್ಯಾ.ಶರ್ಮಿಳಾ

ಉಡುಪಿ :  ಮಾರುಕಟ್ಟೆಯಲ್ಲಿ ಗ್ರಾಹಕನೇ ಸಾರ್ವಭೌಮನಾಗಿದ್ದು, ಸರಕು ಮತ್ತು ಸೇವೆಗಳನ್ನು ಖರೀದಿಸುವಾಗ ಗ್ರಾಹಕರು ತಮ್ಮ ಹಕ್ಕುಗಳು ಮತ್ತು ಜವಾಬ್ದಾರಿಗಳ ಬಗ್ಗೆ ತಿಳಿದಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಹೇಳಿದರು.

ಅವರು ಇಂದು ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳಕೆದಾರರ ವೇದಿಕೆ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಕಾನೂನು ಮಾಪನ ಶಾಸ್ತç ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟಿçÃಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರಕಾರಿ ಮತ್ತು ಖಾಸಗಿ ವಲಯದಲ್ಲಿ ಯಾವುದೇ ಸರಕು ಮತ್ತು ಸೇವೆಗಳನ್ನು ಪಡೆಯುವ ಮುನ್ನ ಗ್ರಾಹಕರು ಆ ವಸ್ತುಗಳು ಮತ್ತು ಸೇವೆಯ ಬಗ್ಗೆ ಸಂಪೂರ್ಣವಾಗಿ ಪರಿಶೀಲಿಸಿ, ಗುಣಮಟ್ಟವನ್ನು ಖಾತರಿಪಡಿಸಿಕೊಂಡು ಅವುಗಳನ್ನು ಖರೀದಿಸಬೇಕು. ಮಾರಾಟಗಾರರು ಕಳಪೆ ವಸ್ತುಗಳನ್ನು ಮೋಸದಿಂದ ಗ್ರಾಹಕರಿಗೆ ಮಾರಿದ್ದಲ್ಲಿ ಅಂತಹ ಮಾರಾಟಗಾರರಿಂದ ಸೂಕ್ತ ಪರಿಹಾರ ಪಡೆಯುವ ಹಕ್ಕುಗಳನ್ನು ಗ್ರಾಹಕರು ಹೊಂದಿದ್ದು, ಉಡುಪಿ ಜಿಲ್ಲೆಯಲ್ಲಿ ಗ್ರಾಹಕರ ವ್ಯಾಜ್ಯಗಳ ಪ್ರಕರಣಗಳು ತ್ವರಿತವಾಗಿ ವಿಲೇವಾರಿ ಆಗುತ್ತಿವೆ ಎಂದರು.

ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲೆ ಡಾ.ನಿರ್ಮಲಾ ಕುಮಾರಿ ಕಾರ್ಯಕ್ರಮ ಉದ್ಘಾಟಿಸಿ, ಪ್ರತಿಯೊಬ್ಬ ಸಾರ್ವಜನಿಕರೂ ಒಂದಲ್ಲ ಒಂದು ರೀತಿಯಲ್ಲಿ ಗ್ರಾಹಕರೇ ಆಗಿದ್ದು, ತಮ್ಮ ಹಕ್ಕುಗಳ ಬಗ್ಗೆ ಮಾಹಿತಿ ಮತ್ತು ಜಾಗೃತಿ ಹೊಂದಿರಬೇಕು ಎಂದರು.

ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ.ರಘುನಾಥ್ ಅಧ್ಯಕ್ಷತೆ ವಹಿಸಿದ್ದರು.
ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪ ನಿರ್ದೇಶಕ ಮಹಮದ್ ಇಸಾಕ್, ಕಾನೂನು ಮಾಪನ ಶಾಸ್ತç ಇಲಾಖೆಯ ಸಹಾಯಕ ನಿರ್ದೇಶಕ ಗಜೇಂದ್ರ ಉಪಸ್ಥಿತರಿದ್ದರು.

ಬಳಕೆದಾರರ ವೇದಿಕೆಯ ಸಂಚಾಲಕ ಎ.ಪಿ.ಕೊಡಂಚ ಉಪನ್ಯಾಸ ನೀಡಿದರು. ಸಹ ಸಂಚಾಲಕ ಪ್ರೊ.ಕೆ.ನಾರಾಯಣನ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿಶ್ವಸ್ಥರಾದ ಹರಿಕೃಷ್ಣ ಶಿವತ್ತಾಯ ಸ್ವಾಗತಿಸಿ, ಲಕ್ಷಿö್ಮಬಾಯಿ ನಿರೂಪಿಸಿ, ವಾದಿರಾಜಾಚಾರ್ಯ ವಂದಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!