ಮಧ್ಯರಾತ್ರಿ 1 ಗಂಟೆ ತನಕ ಹೊಸ ವರ್ಷಾಚರಣೆಗೆ ಗಡುವು, ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ
ಬೆಂಗಳೂರು, ಡಿ.26- ನೆರೆಯ ಚೀನಾದಲ್ಲಿ ಬಿಎಫ್.7 ಉಲ್ಣಗೊಂಡಿದ್ದು, ರಾಜ್ಯದಲ್ಲಿ ಭೀತಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಮಧ್ಯರಾತ್ರಿ ಒಂದು ಗಂಟೆಯವರೆಗೆ ಹೊಸ ವರ್ಷಾಚರಣೆಗೆ ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ಕೆಲವು ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ.
ಹೊಸ ಮಾರ್ಗಸೂಚಿ ಕುರಿತು ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಕಂದಾಯ ಸಚಿವ ಆರ್.ಅಶೋಕ್ ಹಾಗೂ ಆರೋಗ್ಯ ಸಚಿವ ಡಾ.ಸುಧಾಕರ್ ಹೊಸ ನಿಯಮ ಕುರಿತು ಮಾಹಿತಿ ನೀಡಿದರು.
ಹೊಸ ವರ್ಷದ ಆಚರಣೆಗೆ ಸರ್ಕಾರ ಮಾಸ್ಕ್ ಕಡ್ಡಾಯ ಮಾಡಿದ್ದಲ್ಲದೇ ಸಂಭ್ರಮಾಚರಣೆಗೆ ಮಧ್ಯರಾತ್ರಿ 1 ಗಂಟೆವರೆಗೆ ಗಡುವು ನೀಡಲಾಗಿದೆ. ಪಾರ್ಟಿಗಳಲ್ಲಿ ಹಿರಿಯರು, ಮಕ್ಕಳು, ಗರ್ಭಿಣಿಯರು ಭಾಗಿಯಾದಂತೆ ಪಾರ್ಟಿ ಆಯೋಜಕರು ನೋಡಿಕೊಳ್ಳಬೇಕು ಎಂದರು.
ಮಧ್ಯರಾತ್ರಿ 1 ಗಂಟೆ ನಂತರ ಎಂ.ಜಿ.ರೋಡ್, ಬ್ರಿಗೇಡ್ ರೋಡ್ ಸೇರಿದಂತೆ ಇತರೆಡೆ ಯಾವುದೇ ಸಂಭ್ರಮಾಚರಣೆಗೆ ಅವಕಾಶ ಇರಲ್ಲ ಮತ್ತು ಪಬ್, ಹೋಟೆಲ್, ರೆಸ್ಟೋರೆಂಟ್ ಮಧ್ಯರಾತ್ರಿ 1 ಗಂಟೆ ನಂತರ ಬಂದ್ ಮಾಡಬೇಕೆಂದು ತಿಳಿಸಿದರು.
ಚಿತ್ರಮಂದಿರ, ಶಾಲಾ-ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಲಾಗಿದೆ. ಯಾರೂ ಆತಂಕಪಡಬೇಕಾದ ಅಗತ್ಯವಿಲ್ಲ ಎಚ್ಚರಿಕೆ ವಹಿಸಬೇಕೆಂದು ಮನವಿ ಮಾಡಿದರು.
ಹೊಸ ವರ್ಷಾಚರಣೆ ನಡೆಯುವ ಸ್ಥಳಗಳಲ್ಲಿ ಅನುಮತಿಗಿಂತ ಹೆಚ್ಚು ಸಾಮರ್ಥ್ಯ ಹೊಂದಿರಬಾರದು ಅವರು ತಿಳಿಸಿದರು