ಕರಾವಳಿ
ದಕ್ಷಿಣ ಕನ್ನಡ ಸೇರಿದಂತೆ 10 ಜಿಲ್ಲೆಗಳಲ್ಲಿ ಮತ್ತೆ ಲಾಕ್ ಡಾನ್ ಆಗುವ ಸಂಭವ !!

ಬೆಂಗಳೂರು:ಕೋವಿಡ್ ನ ಮೂರನೇ ಅಲೆಗೆ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 10 ಜಿಲ್ಲೆಗಳು ಡೇಂಜರ್ ಝೋನ್ ನಲ್ಲಿ ಇರುವುದಾಗಿ ಕೇಂದ್ರ ಎಚ್ಚರಿಕೆ ನೀಡಿದೆ. ಬೆಂಗಳೂರು, ಮೈಸೂರು, ತುಮಕೂರು, ಹಾಸನ, ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವಂತೆ ಕೇಂದ್ರ ತಿಳಿಸಿದೆ. ಕರ್ನಾಟಕದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಈ 10 ಜಿಲ್ಲೆಗಳಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ಈ ಜಿಲ್ಲೆಗಳಲ್ಲಿ ಲಾಕ್ ಡೌನ್ ಹೇರುವ ಸಾಧ್ಯತೆ ಇದೆ ಎಂದು ಮಾಹಿತಿ ದೊರಕಿದೆ.
ಕೊರೋನಾ ಕೇಸ್ ಗಳು ಹೆಚ್ಚಾಗಿರುವುದರಿಂದ ಹಲವು ರಾಜ್ಯಗಳಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತಿದೆ. ಮಹಾರಾಷ್ಟ್ರ, ತಮಿಳುನಾಡು, ಒಡಿಶಾ, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾಗಶಃ ಲಾಕ್ ಡೌನ್ ಜಾರಿ ಮಾಡಲಾಗಿದೆ.