ರಾಜ್ಯ

ಕನ್ನಡ ಚಿತ್ರರಂಗದ ಹಾಸ್ಯ ನಟ ಮನದೀಪ್ ರಾಯ್ ನಿಧನ.

ಬೆಂಗಳೂರು: ಕನ್ನಡ ಚಿತ್ರರಂಗದ ಹಾಸ್ಯ ನಟ ಮನದೀಪ್ ರಾಯ್ (74) ಇಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚೆಗೆ ಹೃದಯಾಘಾತವಾಗಿ ಆಸ್ಪತ್ರೆ ಸೇರಿದ್ದ ಮನದೀಪ್‌ ರಾಯ್‌ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚೇತರಿಕೆ ಬಳಿಕ ಮನೆಗೆ ವಾಪಸ್‌ ಆಗಿದ್ದ ಅವರು ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ.

ರಂಗಭೂಮಿ ಕಲಾವಿದರೂ ಆಗಿದ್ದ ಮನದೀಪ್‌ ರಾಯ್‌ ಪೋಷಕ ಪಾತ್ರದಲ್ಲಿ ಖ್ಯಾತಿ ಪಡೆದಿದ್ದರು.

ಕನ್ನಡ ಚಿತ್ರರಂಗದ ನಟ,ನಟಿಯರು ಇವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!