ಕರಾವಳಿ

ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ತಾಲೂಕು ನಲ್ಲೂರು ಗ್ರಾಮದ ಗಾಂಧಿನಗರ ಎಂಬಲ್ಲಿರುವ ಅನ್ನಪೂರ್ಣೇಶ್ವರಿ ಕಾಂಪ್ಲೆಕ್ಸ್ ನಲ್ಲಿ ಶ್ರೀ ಓಂ ಎಂಬ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ನಡೆದಿದೆ.

ಉಡುಪಿ ತಾಲೂಕಿನ ಬೈರಂಪಳ್ಳಿ ಗ್ರಾಮದ ಹರಿಖಂಡಿಗೆ ಕೆರೆಹಾಡಿ ಮನೆ ನಿವಾಸಿ ಮಹೇಶ್ ಬಿ ಹೆಗ್ಡೆ (47 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಇವರು ಕಳೆದ ಒಂದು ವರ್ಷದಿಂದ ಗಾಂಧಿ ನಗರದಲ್ಲಿರುವ ಶ್ರೀ ಓಂ ಹೋಟೆಲ್ ನಲ್ಲಿ ಕೆಲಸ ಮಾಡುತಿದ್ದರು. ಅವರು ಅಲ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಕಾಯಿಲೆ ಗುಣವಾಗದೆ ದಿನದಿಂದ ದಿನಕ್ಕೆ ದೇಹ ಸ್ಥಿತಿ ಕ್ಷೀಣಿಸುತ್ತಿರುವುದರಿಂದ ಮಾನಸಿಕವಾಗಿ ನೊಂದಿದ್ದರು. ಇದೇ ವಿಚಾರವಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ನಿನ್ನೆ ಮುಂಜಾನೆ ವೇಳೆಗೆ ತಾನು ಕೆಲಸ ಮಾಡುತ್ತಿದ್ದ ಕ್ಯಾಂಟೀನ್ ಒಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!