ರಾಜ್ಯ

ರಾಜ್ಯ ಬಜೆಟ್: ನಿರುದ್ಯೋಗಿಗಳಿಗೆ ‘ಯುವ ಸ್ನೇಹಿ’ ಯೋಜನೆ -2000 ಆರ್ಥಿಕ ನೆರೆವು

ಬೆಂಗಳೂರು, ಫೆ 17 : ಪದವಿ ಶಿಕ್ಷಣವನ್ನು ಮುಗಿಸಿ ಮೂರು ವರ್ಷದ ನಂತರವೂ ಯಾವುದೇ ಉದ್ಯೋಗ ದೊರೆಯದ ಯುವಕರಿಗೆ ಸ್ಮರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ಈಡಲು ‘ಯುವ ಸ್ನೇಹಿ’ ಎಂಬ ಹೊಸ ಯೋಜನೆಯಡಿ ತಲಾ 2000 ರೂ.ಗಳ ಒಂದು ಬಾರಿಯ ಆರ್ಥಿಕ ನೆರೆವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಜೆಟ್ ನಲ್ಲಿ ಘೋಷಿಸಿದ್ದಾರೆ.

ಬದುಕುವ ದಾರಿ ಎಂಬ ಹೊಸ ಯೋಜನೆಯಡಿ ಶಾಲಾ ಶಿಕ್ಷಣದ ನಂತರ ವಿವಿಧ ಕಾರಣಗಳಿಂದ ವಿದ್ಯಾಭ್ಯಾಸ ಮುಂದುವರೆಸಲು ಸಾಧ್ಯವಾಗದೇ ಇರುವ ಯುವಕರಿಗೆ ಐಟಿಐಗಳಲಿ 3 ತಿಂಗಳ ಅವಧಿಯ ವೃತ್ತಿಪರ ಸರ್ಟಿಫಿಕೇಟ್ ತರಬೇತಿ ಪಡೆಯಲು ಮಾಸಿಕ 1,500 ರೂ.ಗಳ ಶಿಷ್ಯವೇತನವನ್ನು ನೀಡಲಾಗುವುದು. ಈ ತರಬೇತಿ ಪೂರ್ಣಗೊಳಿಸಿರುವವರಿಗೆ Apprenticeship ಕಾರ್ಯಕ್ರಮದಡಿ 3ಗಳ ತಿಂಗಳಿಗೆ ಮಾಸಿಕ 1500 ರೂ. ಶಿಶಿಕ್ಷು ಭತ್ಯೆಯನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!