ಕರಾವಳಿ

ಉಡುಪಿ – ಉಚ್ಚಿಲ ದಸರಾ – 2025 ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಆಗಸ್ಟ್ 26 ; ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಾಲ್ಕನೇ ವರ್ಷದ ಉಡುಪಿ – ಉಚ್ಚಿಲ ದಸರಾ 2025 ಇದರ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ಗೌರವ ಸಲಹೆಗಾರ, ರುವಾರಿ ನಾಡೋಜ ಡಾ. ಜಿ ಶಂಕರ್ ಬಿಡುಗಡೆಗೊಳಿಸಿದರು.

ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಕೆವಿ ಉಪಾಧ್ಯಾಯ ಪೂಜಾ ವಿಧಿವಿಧಾನ ಪೂರೈಸಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.ವೇದ ಮೂರ್ತಿ ಕೆವಿ ವಿಷ್ಣು ಮೂರ್ತಿ ಉಪಾಧ್ಯಾಯರವರು ಮಹಾಲಕ್ಷ್ಮಿಗೆ ಮತ್ತು ಭದ್ರಕಾಳಿಗೆ ಪೂಜೆ ಸಲ್ಲಿಸಿದರು.

ಈ ಸಂದರ್ಭ ಡಾ. ಜಿ ಶಂಕರ್ ಮಾತನಾಡಿ, ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ ದೇವಳದ ಶಾಲಿನಿ ಜಿ ಶಂಕರ್ ತೆರೆದ ಸಭಾಂಗಣದಲ್ಲಿ ಕಾರ್ಯಕ್ರಮ ನೆರವೇರಲಿದ್ದು.ಕಾರ್ಯಕ್ರಮವನ್ನು ಉಡುಪಿ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮೀ ವಿ ಹೆಬ್ಬಾಳ್ಳರ್ ಉದ್ಘಾಟಿಸಲಿದ್ದಾರೆ.ವಸ್ತು ಪ್ರದರ್ಶನವನ್ನು ಸಚಿವ ಶಿವರಾಜ್ ತಂಗಡಗಿ ಉದ್ಘಾಟಿಸಲಿದ್ದಾರೆ

ಈ ಸಂದರ್ಭ ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ ಕೆ, ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ ಶಂಕರ್ ಸಹಿತ ಸಂಸದರು, ಶಾಸಕರು, ಮಾಜಿ ಸಚಿವರು ಸಹಿತ ಗಣ್ಯರು ಭಾಗವಹಿಸಲಿದ್ದು, ಕಳೆದ ಬಾರಿಗಿಂತ ಅದ್ದೂರಿಯಾಗಿ ದಸರಾ ಉತ್ಸವ ನಡೆಯಲಿದೆ ಎಂದರು.

ಈ ಸಂದರ್ಭ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ನಾಲ್ ಸುವರ್ಣ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ದಕ್ಷಿಣಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷ ಮೋಹನ್ ಬೆಂಗ್ರೆ, ಗೌರವ ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಎಸ್ ಸುವರ್ಣ, ಉಚ್ಚಿಲ ದಸರಾ ಉತ್ಸವ ಸಮಿತಿಯ ಅಧ್ಯಕ್ಷ ವಿನಯ್ ಕರ್ಕೇರ, ಮಹಿಳಾ ಸಂಚಾಲಕಿ ಶ್ರೀಮತಿ ಸಂಧ್ಯಾ ದೀಪ ಸುನಿಲ್, ಸುಜಿತ್ ಮುಲ್ಕಿ, ನಾರಾಯಣ ಕರ್ಕೇರಾ, ದಿನೇಶ್ ಎರ್ಮಾಳು, ಎನ್‌ಟಿ ಅಮೀನ್ ದಿನೇಶ್ ಮೂಳೂರು, ವಾಸುದೇವ ಸಾಲ್ಯಾನ್, ಗುಂಡು ಬಿ ಅಮೀನ್, ಪ್ರಧಾನ ಪ್ರಬಂಧಕ ಸತೀಶ್ ಅಮೀನ್, ಮೊಗವೀರ ಮಹಾಜನ ಸಂಘದ ಸದಸ್ಯರು ಉಪಸ್ಥಿತರಿದ್ದರು.

 

 

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker