ತಾಜಾ ಸುದ್ದಿಗಳುರಾಜ್ಯ

10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು, ಮಾ.23: ರಾಜ್ಯದ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಜೂನ್ ತಿಂಗಳಿಂದ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ರಾಜ್ಯದಲ್ಲಿ ಈಗಾಗಲೇ 5 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳು ನಡೆಯುತ್ತಿವೆ. ಮುಂದಿನ ಹಂತದಲ್ಲಿ ಇನ್ನೂ 10 ಸಾವಿರ ಕೇಂದ್ರಗಳಿಗೆ ಈ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಅವರು ತಿಳಿಸಿದರು.

ಅಂಗನವಾಡಿ ನೌಕರರ ಸಂಘದ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ಸಚಿವೆ, ಕಾರ್ಯಕರ್ತೆಯರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದರು. ಈ ಕುರಿತು ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಇಲಾಖೆಯೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಬಿಎಲ್‌ಒ ಕರ್ತವ್ಯಗಳಿಂದ ಮುಕ್ತಿಗೊಳಿಸುವ ಪ್ರಯತ್ನವೂ ನಡೆಯಲಿದೆ ಎಂದು ಅವರು ಹೇಳಿದರು. ಪ್ರತಿಭಟನೆಯನ್ನು ಕೈಬಿಡುವಂತೆ ಕೂಡ ಮನವಿ ಮಾಡಿದರು.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker