
ಮಲ್ಪೆ ಅ.2 : ಗಾಂಧಿ ಜಯಂತಿ ಪ್ರಯುಕ್ತ ಮಲ್ಪೆ ಬೀಚ್ ಬಳಿಯಲ್ಲಿರುವ ಗಾಂಧೀಜಿ ಪ್ರತಿಮೆಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ಜಿಲ್ಲಾಧಿಕಾರಿಗಳಾದ ಜಿ. ಜಗದೀಶ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಎನ್. ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ನಗರಸಭೆಯ ಪೌರಾಯುಕ್ತರಾದ ಆನಂದ್ ಸಿ ಕಲ್ಲೋಲಿಕರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ ಮತ್ತು ಸ್ಕೌಟ್ ಅಂಡ್ ಗೈಡ್ಸ್ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.