
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳದ ಮಾರ್ಕೆಟ್ ರಸ್ತೆಯ ನಿವಾಸಿ ವೀಡಿಯೋಗ್ರಾಫರ್ ಪ್ರಸನ್ನ ಎಂಬವರು ತನ್ನ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕೊರೊನಾ ಪೊಸಿಟಿವ್ ಬಂದ ಹಿನ್ನೆಲೆಯಲ್ಲಿ ವಿಚಲಿತರಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೃತರು 45 ವರ್ಷ ವಯಸ್ಸಿನವರಾಗಿದ್ದು, ಅವಿವಾಹಿತರಾಗಿರುತ್ತಾರೆ. ಕಾರ್ಕಳ ಪೊಲೀಸರು ಕೇಸು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.