
ದಾವಣಗೆರೆ: ಹೊನ್ನಾಳಿಯ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ನಲ್ಲಿ ಧನ್ವಂತರಿ ಹಾಗೂ ಮೃತ್ಯುಂಜಯ ಹೋಮ ಮಾಡಿದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಜಿಲ್ಲಾಡಳಿತ ಶೋಕಾಸ್ ನೋಟಿಸ್ ನೀಡಿದೆ.
ಕೋವಿಡ್ ಕೇರ್ ಸೆಂಟರ್ ನಲ್ಲಿ ಹೋಮ ನಡೆಸಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರೇಣುಕಾಚಾರ್ಯ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಯಾವುದೇ ಹೋಮ ಹವನದಂತಹ ಧಾರ್ಮಿಕ ಚಟುವಟಿಕೆ ನಡೆಸುವುದು ಕಾನೂನು ಬಾಹಿರ. ಹೀಗಾಗಿ ವಿಪತ್ತು ನಿರ್ವಹಣೆ ಕಾಯ್ದೆ ಹಾಗೂ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ ಅಡಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದ್ದಾರೆ.