ರಾಜ್ಯ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಸೆ 12 ರಂದು NEET ಪರೀಕ್ಷೆ ಪ್ರಾರಂಭ !

ನವದೆಹಲಿ, ಜು 12 : ಪ್ರಸಕ್ತ ಸಾಲಿನ NEET ಪರೀಕ್ಷೆ ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿದೆ. ಸೆ.12ಕ್ಕೆ NEET ಪರೀಕ್ಷೆಯ ದಿನಾಂಕ ನಿಗದಿಯಾಗಿದೆ.

ಈ ಕುರಿತು ಸೋಮವಾರ ಮಾಹಿತಿ ನೀಡಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ದೇಶಾದ್ಯಂತ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಿಕೊಂಡು ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಾಳೆ (ಜುಲೈ 13) ಸಂಜೆ 5 ಗಂಟೆಯಿಂದ ಎನ್.ಟಿ.ಎ ವೆಬ್ ಸೈಟ್ ನಲ್ಲಿ ಆರಂಭಗೊಳ್ಳಲಿದೆ ಎಂದು ಹೇಳಿದರು.

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯದೆ ಎಸ್ ಎಸ್ ಎಲ್ ಸಿ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿಯ ಎಸೈನ್ ಮೆಂಟ್ ಗಳ ಅಂಕಗಳನ್ನು ನೀಡಿ ಅದರ ಶೇಕಡಾವಾರು ಲೆಕ್ಕಾಚಾರದಲ್ಲಿ ದ್ವಿತೀಯ ಪಿಯುಸಿ ಯ ಫಲಿತಾಂಶ ಪ್ರಕಟವಾಗಲಿದೆ. ಆದರೆ ಎಲ್ಲರೂ ಪಾಸ್ ಆಗಲಿದ್ದಾರೆ.

ದ್ವಿತೀಯ ಪಿಯುಸಿಯ ಬಳಿಕ ಮೆಡಿಕಲ್ ಸೀಟ್ ಗಾಗಿ ನಡೆಯುವ ಪ್ರವೇಶ ಪರೀಕ್ಷೆ ಇದಾಗಿದೆ. ಕೋವಿಡ್ ಕಾರಣದಿಂದ 155 ನಗರಗಳಿಂದ ದೇಶಾದ್ಯಂತ 198 ನಗರಗಳ 3892 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಮಾಹಿತಿಯನ್ನು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರವರು ತಿಳಿಸಿದರು. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪರೀಕ್ಷೆ ಯಲ್ಲಿ ಕೋವಿಡ್ ನ ಎಲ್ಲಾ ನಿಯಮಗಳನ್ನು ಪಾಲಿಸಲಾಗುವುದು ಎಂದು ತಿಳಿಸಿದರು.
ಜುಲೈ ಮೂರನೇ ವಾರ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ. ಕಳೆದ ವಾರ ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದರು.

 

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker