ಕರಾವಳಿ

ಲಕ್ಷ್ಮೀವೆಂಕಟೇಶ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ಲೀ. ಆಂಬುಲೆನ್ಸ್ ಕೊಡುಗೆ..!

ಜಿಲ್ಲೆಯಲ್ಲಿ ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಕಾರಿಯಾಗಲು ಆಂಬುಲೆನ್ಸ್ ನೀಡುವಂತೆ ಶ್ರೀ ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ಲಿಮಿಟೆಡ್ ಅವರಲ್ಲಿ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಮನವಿ ಮಾಡಿರುವಂತೆ ಇಂದು ದಿನಾಂಕ 09-08-2021 ರಂದು ಶಾಸಕರಾದ ಶ್ರೀ ಕೆ ರಘುಪತಿ ಭಟ್ ಹಾಗೂ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ. ಸುನಿಲ್ ಕುಮಾರ್ ಅವರ ಸಮ್ಮುಖದಲ್ಲಿ ರೂ.16,50,000 ಮೊತ್ತದ ಆಂಬುಲೆನ್ಸ್ ಅನ್ನು ಜಿಲ್ಲಾಸ್ಪತ್ರೆಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಶ್ರೀ ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ಅಧ್ಯಕ್ಷರಾದ ಎಂ. ಶ್ರೀನಿವಾಸ್ ಭಟ್, ಮತ್ಸ್ಯೋದ್ಯಮಿಗಳಾದ ಹರಿಯಪ್ಪ ಕೋಟ್ಯಾನ್ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಾದ ನಾಗಭೂಷಣ್ ಉಡುಪ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಮಧುಸೂದನ್ ನಾಯಕ್ ಮತ್ತು ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker