
ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಪಿಯು ಬೋರ್ಡ್ ಸಿದ್ಧತೆ ನಡೆಸಿದೆ. ಪರೀಕ್ಷೆ ವೇಳೆ ಕೊರೊನಾ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದೆ. ಈ ಬಾರಿ ೧೮ ಸಾವಿರದ ೪೧೪ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು ಇದರಲ್ಲಿ ೧೭೪೬೯ ಖಾಸಗಿ ವಿದ್ಯಾರ್ಥಿಗಳು, ೩೫೨ ರಿಪೀಟರ್ಸ್ ಮತ್ತು ೫೦೯೩ ಪ್ರೆಶರ್ಸ್ ವಿದ್ಯಾರ್ಥಿಗಳು ಸೇರಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯು ೧೯ ಆಗಸ್ಟ್ ನಿಂದ ಸೆಪ್ಟೆಂಬರ್ 3 ರವರೆಗೆ ಜರುಗಲಿದೆ. ರಾಜ್ಯದ ೧೮೭ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಲಾಗಿದ್ದು, ಕೋವಿಡ್ ಸೋಂಕು ಇದ್ರೆ ಕೂಡಲೇ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಲು ತಿಳಿಸಲಾಗಿದೆ.
ಕೋವಿಡ್ ಸೋಂಕಿತರಿಗೂ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದು, ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳಿಗೆ RTPC ನೆಗೇಟಿವ್ ರಿಪೋರ್ಟ್ ಕಡ್ಡಾಯವಾಗಿದೆ.
ಕೇರಳ ಗಡಿ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳಿಗೆ ಕೂಡ RTPC ಟೆಸ್ಟ್ ಕಡ್ಡಾಯವಾಗಿದೆ.ಪರೀಕ್ಷಾ ಕೊಠಡಿಯಲ್ಲಿ ಡೆಸ್ಕ್ ಒಂದರಲ್ಲಿ ಒಬ್ಬರಂತೆ ಹತ್ತು ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ.
ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆಯಿದ್ದು, ಯಾವುದೇ ಆತಂಕವಿಲ್ಲದೇ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ.