
ಉಡುಪಿಯಲ್ಲಿ ದಿನಾಂಕ 06-09-2021 ಮತ್ತು 07-09-2021 ರಂದು ನೇಶನ್ ಫಸ್ಟ್ ತಂಡದ ವತಿಯಿಂದ “ಫಿಟ್ ರಹೋ ಉಡುಪಿ” ಎಂಬ ಧ್ಯೇಯವಾಕ್ಯದೊಂದಿಗೆ ಆಯೋಜಿಸಿರುವ 75 ಕೀ.ಮೀ ಮ್ಯಾರಥಾನ್ ಓಟಕ್ಕೆ ಇಂದು ದಿನಾಂಕ 06-09-2021 ರಂದು ಪಲಿಮಾರು ಮಠದ ಶ್ರೀ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಹಾಗೂ ಉಡುಪಿ ಚರ್ಚಿನ ಧರ್ಮಗುರುಗಳಾದ ಚಾರ್ಲ್ಸ್ ಮ್ಯಾನೇಜಸ್ ರೊಂದಿಗೆ ಶಾಸಕ ಶ್ರೀ ಕೆ ರಘುಪತಿ ಭಟ್ ರವರು ಉಡುಪಿ ಕ್ಲಾಕ್ ಟವರ್ ಬಳಿ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲರಾದ ರಾಘವೇಂದ್ರ ಎ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ಸ್ಥಳೀಯ ನಗರಸಭಾ ಸದಸ್ಯರಾದ ಟಿ.ಜಿ ಹೆಗ್ಡೆ ಹಾಗೂ ನೇಶನ್ ಫಸ್ಟ್ ತಂಡದ ಸೂರಜ್ ಕಿದಿಯೂರು ಮತ್ತು ಪ್ರಮುಖರು ಉಪಸ್ಥಿತರಿದ್ದರು.