
ಸೋಮೇಶ್ವರ ಅಭಯಾರಣ್ಯ ಪ್ರದೇಶದಿಂದ ಬರುವ ಕಾಡು ಪ್ರಾಣಿಗಳಿಂದ ರೈತರು ಬೆಳೆದ ಕೃಷಿಗೆ ಹಾನಿ ಉಂಟಾಗುತ್ತಿದ್ದು ಕಾಡು ಪ್ರಾಣಿಗಳ ಹಾವಳಿ ನಿಯಂತ್ರಣಕ್ಕೆ ಸೂಕ್ತ ಕ್ರಮಕೈಗೊಳ್ಳಲು ಅರಣ್ಯ ಸಚಿವರಲ್ಲಿ ಶಾಸಕ ರಘುಪತಿ ಭಟ್ ಮನವಿ ಮಾಡಿದರು.
ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಅರವಿಂದ ಲಿಂಬಾವಳಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಅರಣ್ಯ ಇಲಾಖೆಗೆ ಸಂಬಂಧಿಸಿದ ಸಭೆಯಲ್ಲಿ ಭಾಗವಹಿಸಿ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಶೀಘ್ರದಲ್ಲಿ ಪರಿಹಾರ ಒದಗಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕಾರ್ಕಳ ಕ್ಷೇತ್ರದ ಶಾಸಕರಾದ ವಿ ಸುನೀಲ್ ಕುಮಾರ್, ಕಾಪು ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕುಂದಾಪುರ ಕ್ಷೇತ್ರದ ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಬೈಂದೂರು ಕ್ಷೇತ್ರದ ಶಾಸಕರಾದ ಸುಕುಮಾರ್ ಶೆಟ್ಟಿ ಮತ್ತು ಸಹಾಯಕ ಆಯುಕ್ತರಾದ ರಾಜು ಕೆ, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಜಿಲ್ಲಾ ಅರಣ್ಯಾಧಿಕಾರಿಗಳಾದ ಆಶಿಶ್ ರೆಡ್ಡಿ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.